ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ರಿಮಿನಲ್‌ಗಳ ಸ್ಪರ್ಧೆ: ಆಯೋಗವೇ ನಿರ್ಧರಿಸಲಿ’

Last Updated 25 ನವೆಂಬರ್ 2019, 18:31 IST
ಅಕ್ಷರ ಗಾತ್ರ

ನವದೆಹಲಿ : ಕ್ರಿಮಿನಲ್ ಅಪರಾಧ ಹಿನ್ನೆಲೆ ಇರುವವರನ್ನು ರಾಜಕೀಯ ಪಕ್ಷಗಳು ಚುನಾವಣೆ ಕಣಕ್ಕೆ ಇಳಿಸದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ‘ತರ್ಕಬದ್ಧ ಆದೇಶ’ ಹೊರಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಚುನಾವಣಾ ಆಯೋಗಕ್ಕೆ ಕೋರಿದೆ.

ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವಕೀಲ ಮತ್ತು ಬಿಜೆಪಿ ನಾಯಕಿ ಅಶ್ವಿನಿ ಉಪಾಧ್ಯಾಯ, ‘ಅಪರಾಧ ಹಿನ್ನೆಲೆಯುಳ್ಳವರ ಸ್ಪರ್ಧೆ ತಡೆಯಲು ಸೂಕ್ತ ವ್ಯವಸ್ಥೆ ರೂಪಿಸುವಂತೆ ಆಯೋಗಕ್ಕೆ ನಿರ್ದೇಶನ ಕೊಡಬೇಕು’ ಎಂದು ಕೋರಿದ್ದರು.

ಅರ್ಜಿದಾರರು ಜನವರಿ 22, 2019ರಂದು ಸಲ್ಲಿಸಿರುವ ಮನವಿಯನ್ನು ಪರಿಗಣಿಸಬೇಕು ಹಾಗೂ ಸಮರ್ಥನೀಯವಾದ ಆದೇಶವನ್ನು ಮೂರು ತಿಂಗಳಲ್ಲಿ ಹೊರಡಿಸಬೇಕು ಎಂದು ಸೂಚಿಸುತ್ತೇವೆ ಎಂದು ಮುಖ್ಯನ್ಯಾಯಮೂರ್ತಿ ಎಸ್‌.ಎ.ಬೊಬಡೆ ನೇತೃತ್ವದ ದ್ವಿಸದಸ್ಯ ಪೀಠಅಭಿಪ್ರಾಯಪಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT