ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಧನ ಬಂಧನ: ಸಿಆರ್‌ಪಿಎಫ್ ಹೆಚ್ಚುವರಿ ನಿರ್ದೇಶಕರಿಂದ ಕರ್ನಾಟಕ ಡಿಜಿಪಿಗೆ ಪತ್ರ

ಪ್ರಕರಣದ ಬಗ್ಗೆ ತನಿಖೆಗೆ ಮನವಿ
Last Updated 27 ಏಪ್ರಿಲ್ 2020, 7:35 IST
ಅಕ್ಷರ ಗಾತ್ರ
ADVERTISEMENT
""

ನವದೆಹಲಿ: ಯೋಧ ಸಚಿನ್ ಸಾವಂತ್ ಅವರನ್ನು ಬಂಧಿಸಿರುವ ವಿಷಯಕ್ಕೆ ಸಂಬಂಧಿಸಿ ತನಿಖೆ ನಡೆಸುವಂತೆ ಮನವಿ ಮಾಡಿ ಸಿಆರ್‌ಪಿಎಫ್‌ ಹೆಚ್ಚುವರಿ ಮಹಾ ಪ್ರಧಾನ ನಿರ್ದೇಶಕರು ಕರ್ನಾಟಕ ಡಿಜಿಪಿಗೆ ಪತ್ರ ಬರೆದಿದ್ದಾರೆ.

ಲಾಕ್‌ಡೌನ್‌ ಆದೇಶದ ಅನುಷ್ಠಾನ ಕಾರ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಸಿಆರ್‌ಪಿಎಫ್‌ ಕೋಬ್ರಾ ಕಮಾಂಡೊ ಸಾವಂತ್ ಅವರನ್ನು ಬೆಳಗಾವಿ ಪೊಲೀಸರು ಏಪ್ರಿಲ್ 23ರಂದು ಬಂಧಿಸಿದ್ದರು.

ಇಬ್ಬರು ಕಾನ್‌ಸ್ಟೆಬಲ್‌ಗಳು ಹಾಗೂ ಯೋಧನ ನಡುವೆ ಜಟಾಪಟಿ ನಡೆದಿದೆ ಎಂದೂ ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಯೋಧನನ್ನು ಪೊಲೀಸರು ಅನುಚಿತವಾಗಿ ನಡೆಸಿಕೊಂಡಿದ್ದಾರೆ ಎಂಬ ಆರೋಪಗಳೂ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತವಾಗಿದ್ದವು.

ಇದರ ಬೆನ್ನಲ್ಲೇ, ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದರು.

ಯೋಧನ ಬಗ್ಗೆಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಆಗಿದ್ದ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT