ಬುಧವಾರ, ಜೂಲೈ 8, 2020
21 °C

ಕೋವಿಡ್‌ಗೆ ಸಿಆರ್‌ಪಿಎಫ್‌ ಯೋಧ ಬಲಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಯೋಧರೊಬ್ಬರು ಕೋವಿಡ್‌–19ನಿಂದಾಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ದೇಶದ ಅತಿದೊಡ್ಡ ಅರೆಸೇನಾ ಪಡೆಯಾಗಿರುವ ಸಿಆರ್‌ಪಿಎಫ್‌ನ ಒಟ್ಟು 11 ಯೋಧರು ಕೋವಿಡ್‌ನಿಂದಾಗಿ ಮೃತಪಟ್ಟಂತಾಗಿದೆ.

141ನೇ ಬೆಟಾಲಿಯನ್‌ನಲ್ಲಿದ್ದ ಈ ಯೋಧಗೆ ಶ್ವಾಸನಾಳದ ಕ್ಯಾನ್ಸರ್‌ ಇತ್ತು. ಕಳೆದ ಏಪ್ರಿಲ್‌ನಿಂದ ಚಿಕಿತ್ಸೆಗಾಗಿ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಕೋವಿಡ್‌ನಿಂದಾಗಿ ಶುಕ್ರವಾರ ಮೃತಪಟ್ಟರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು