ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಸಿಆರ್‌ಪಿಎಫ್ ಯೋಧನಿಗೆ ಕೊರೊನಾ ಸೋಂಕು

Last Updated 22 ಏಪ್ರಿಲ್ 2020, 13:59 IST
ಅಕ್ಷರ ಗಾತ್ರ

ನವದೆಹಲಿ: ‘ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯೋಜನೆಗೊಂಡಿರುವ ಬೆಟಾಲಿಯನ್ ಭಾಗವಾಗಿರುವ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ಯೋಧನೊಬ್ಬನಿಗೆ ಕೋವಿಡ್‌–19 ಇರುವುದು ದೃಢಪಟ್ಟಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಈ ಯೋಧ ನರ್ಸಿಂಗ್ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧನನ್ನು ದೆಹಲಿ ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕ ವಾರ್ಡ್‌ನಲ್ಲಿ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

‘14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿದ್ದ ಈ ಯೋಧನನ್ನು ಕರ್ತವ್ಯಕ್ಕೆ ಹಾಜರಾಗುವ ಮುನ್ನ ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಮಂಗಳವಾರ ಯೋಧನಿಗೆ ಕೋವಿಡ್‌–19 ಇರುವುದು ದೃಢಪಟ್ಟಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ತಿಂಗಳ ಆರಂಭದಲ್ಲಿ ಅರೆಸೇನಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರೊಬ್ಬರಿಗೆ ಕೋವಿಡ್‌–19 ಇರುವುದು ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT