ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19 | ಸಿಆರ್‌ಪಿಎಫ್‌ ಅಧಿಕಾರಿ ಸಾವು

Last Updated 28 ಏಪ್ರಿಲ್ 2020, 20:07 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) 55 ವರ್ಷದ ಅಧಿಕಾರಿಯೊಬ್ಬರು ಕೋವಿಡ್‌–19ರಿಂದ ಮಂಗಳವಾರ ಮೃತಪಟ್ಟಿದ್ದಾರೆ.

ಸಹಾಯಕ ಪೊಲೀಸ್‌ ನಿರೀಕ್ಷಕ ಶ್ರೇಣಿಯ ಅಧಿಕಾರಿಗೆ ಕೆಲವು ದಿನಗಳ ಹಿಂದೆ ಸೋಂಕು ಕಾಣಿಸಿಕೊಂಡಿದ್ದು, ಸಫ್ದರ್‌ಜಂಗ್‌ ಆಸ್ಪತ್ರೆ ದಾಖಲಾ‌ಗಿದ್ದರು.‍ದೆಹಲಿಯ 31ನೇ ಬೆಟಾಲಿಯನ್‌ನಲ್ಲಿ ಕೆಲಸ ಮಾಡುತ್ತಿದ್ದರು. ಸೋಂಕಿನಿಂದ ಮೃತಪಟ್ಟ ಮೊದಲ ಪ್ರಕರಣವಿದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬೆಟಾಲಿಯನ್‌ನಲ್ಲಿರುವ 23 ಅಧಿಕಾರಿಗಳು ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಬಿಎಸ್‌ಎಫ್‌ ಮತ್ತು ಸಿಐಎಸ್‌ಎಫ್‌ನಲ್ಲಿಯೂ ಸೋಂಕಿತ ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT