ಶುಕ್ರವಾರ, ಆಗಸ್ಟ್ 7, 2020
22 °C

ಉಗ್ರರ ದಾಳಿ: ಸಿಆರ್‌ಪಿಎಫ್‌ ಯೋಧ, ಬಾಲಕ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಉಗ್ರರ ಶೋಧ ಕಾರ್ಯಾಚರಣೆಯಲ್ಲಿರುವ ಭದ್ರತಾ ಪಡೆ– ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಸಿಆರ್‌ಪಿಎಫ್‌ ಯೋಧ ಮತ್ತು ಅಪ್ರಾಪ್ತ ಬಾಲಕ ಮೃತಪಟ್ಟಿದ್ದಾರೆ. 

‘ಮಧ್ಯಾಹ್ನ 12.10ರ ಸುಮಾರಿಗೆ ಪಾದಶಾಹಿಬಾಗ್‌ ಸೇತುವೆ ಬಳಿ ಇರುವ ಸಿಆರ್‌ಪಿಎಫ್‌ನ 90ನೇ ಬೆಟಾಲಿಯನ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು.ಈ ವೇಳೆ ಬಾಲಕ ಮತ್ತು ಸಿಪಿಆರ್‌ಎಫ್‌ ಯೋಧ ಗಂಭೀರವಾಗಿ ಗಾಯಗೊಂಡರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು’ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದರು.

ಸಿಆರ್‌ಪಿಎಫ್‌ ಯೋಧ ಶಾಮಲ್‌ ಕುಮಾರ್‌ ಮತ್ತು ಬಾಲಕ ನಿಹಾನ್‌ ಯಾವರ್‌ ಸಾವನ್ನಪ್ಪಿದ್ದು  ಉಗ್ರರಿಗಾಗಿ ಭದ್ರತಾ ಪಡೆ ಶೋಧ ಕಾರ್ಯ ಆರಂಭಿಸಿದೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು