ಗುರುವಾರ , ಜೂನ್ 24, 2021
27 °C
ಮೇಘಾಲಯದ ಶಿಲಾಂಗ್‌ನಲ್ಲಿ ಕರ್ಫ್ಯೂ ಜಾರಿ | ಹಲವೆಡೆ ಇಂಟರ್‌ನೆಟ್‌ ಸ್ಥಗಿತ

ಸಿಎಎ ಪರ–ವಿರೋಧಿ ಗುಂಪುಗಳ ನಡುವೆ ಬುಗಿಲೆದ್ದ ಸಂಘರ್ಷ: ಇಬ್ಬರ ಹತ್ಯೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಶಿಲ್ಲಾಂಗ್‌: ಮೇಘಾಲಯದ ಪೂರ್ವ ಖಾಶಿ ಪರ್ವತ ಪ್ರದೇಶದಲ್ಲಿ ಸಿಎಎ ಪರ–ವಿರೋಧಿ ಗುಂಪುಗಳ ನಡುವೆ ಬುಗಿಲೆದ್ದ ಸಂಘರ್ಷದಲ್ಲಿ ಇಬ್ಬರ ಹತ್ಯೆಯಾಗಿದ್ದು, ಹಲವರಿಗೆ ಗಾಯಗಳಾಗಿವೆ. 

ಖಾಶಿ ವಿದ್ಯಾರ್ಥಿ ಸಂಘಟನೆ ಮತ್ತು ಬುಡಕಟ್ಟು ಜನಾಂಗಕ್ಕೆ ಸೇರದ ಜನರ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. 

ಘಟನೆಯಲ್ಲಿ ಖಾಶಿ ವಿದ್ಯಾರ್ಥಿ ಸಂಘಟನೆಯ ಸದಸ್ಯ ಸೇರಿದಂತೆ ಇನ್ನೊಬ್ಬ ಯುವಕ ಚಾಕು ಇರಿತದಿಂದ ಮೃತ ಪಟ್ಟಿದ್ದಾರೆ. 

ಮೇಘಾಲಯ ರಾಜಧಾನಿ ಶಿಲ್ಲಾಂಗ್‌ನಿಂದ 90 ಕಿ.ಮೀ ದೂರವಿರುವ ಖಾಶಿ ಪರ್ವತ ಪ್ರದೇಶದಲ್ಲಿ ಬಿಗುವಿನ ವಾತಾವರಣವಿದ್ದು, ಶಾಂತಿ ಕಾಪಾಡಲು ರಾಜ್ಯ ಸರ್ಕಾರ ಜನರಿಗೆ ಮನವಿ ಮಾಡಿದೆ. 

ಶಿಲ್ಲಾಂಗ್‌ ಸೇರಿದಂತೆ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. 6 ಜಿಲ್ಲೆಗಳಲ್ಲಿ ಇಂಟರ್‌ನೆಟ್‌ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು