ಮಂಗಳವಾರ, ಜೂಲೈ 7, 2020
28 °C

ಅಂಪನ್ ಚಂಡಮಾರುತದಿಂದ ₹1 ಲಕ್ಷ ಕೋಟಿ ನಷ್ಟ: ಪಶ್ಚಿಮ ಬಂಗಾಳ

ಪಿಟಿಐ Updated:

ಅಕ್ಷರ ಗಾತ್ರ : | |

Cyclone Amphan

ಕೋಲ್ಕತ್ತ: ಅಂಪನ್ ಚಂಡಮಾರುತದಿಂದ ₹1 ಲಕ್ಷ ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ಕೇಂದ್ರ ಸರ್ಕಾರದ ಅಂತರ ಸಚಿವಾಲಯ ಸಮಿತಿಗೆ ಪಶ್ಚಿಮ ಬಂಗಾಳ ಸರ್ಕಾರ ತಿಳಿಸಿದೆ.

ಚಂಡಮಾರುತದಿಂದಾಗಿ ಸಂಭವಿಸಿರುವ ಹಾನಿಯ ಬಗ್ಗೆ ಕೇಂದ್ರ ಸರ್ಕಾರದ ಅಂತರ ಸಚಿವಾಲಯ ಸಮಿತಿಯು ಪಶ್ಚಿಮ ಬಂಗಾಳದಲ್ಲಿ ಎರಡು ದಿನಗಳ ಸಮೀಕ್ಷೆ ಕೈಗೊಂಡಿದೆ.

ಚಂಡಮಾರುತದಿಂದಾಗಿ ₹1,02,442 ಕೋಟಿ ನಷ್ಟವಾಗಿದೆ. ಈ ಪೈಕಿ ಮನೆಗಳಿಗೆ ಆದ ಹಾನಿಯಿಂದಲೇ ಗರಿಷ್ಠ, ಅಂದರೆ ₹ 28.56 ಕೋಟಿ ನಷ್ಟ ಸಂಭವಿಸಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳೂ ಸೇರಿದಂತೆ ಕೈಗಾರಿಕಾ ವಲಯಕ್ಕೆ ₹26,790 ಕೋಟಿ ನಷ್ಟವಾಗಿದೆ. ಕೃಷಿ ಕ್ಷೇತ್ರಕ್ಕೆ ₹15,860 ಕೋಟಿ ನಷ್ಟ ಉಂಟಾಗಿದೆ ಎಂದು ರಾಜ್ಯ ಸರ್ಕಾರವು ಕೇಂದ್ರದ ಸಮಿತಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿದೆ

ಇದನ್ನೂ ಓದಿ: 

ಮೀನುಗಾರಿಕೆಗೆ ₹2,000 ಕೋಟಿ, ತೋಟಗಾರಿಕೆಗೆ ₹6,581 ಕೋಟಿ, ಪ್ರಾಣಿ ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ ₹452 ಕೋಟಿ, ನಗರ ಮೂಲಸೌಕರ್ಯ ಕ್ಷೇತ್ರಕ್ಕೆ ₹6,750 ಕೋಟಿ ನಷ್ಟವಾಗಿದೆ.

‘ನಷ್ಟದ ಮೌಲ್ಯಮಾಪನದ ಪಟ್ಟಿಯನ್ನು ಕೇಂದ್ರದ ತಂಡಕ್ಕೆ ನೀಡಲಾಗಿದೆ. ನಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಾಗಿದ್ದು, ತುರ್ತು ನೆರವು ನೀಡುವಂತೆ ಮನವಿ ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು