ಮಂಗಳವಾರ, ಜೂನ್ 2, 2020
27 °C

ಅಂಪನ್‌: ಮಮತಾ ಬ್ಯಾನರ್ಜಿ ಸರ್ಕಾರದ ನಿರ್ಲಕ್ಷ್ಯ ವಿರೋಧಿಸಿ ನಾಗರಿಕರ ಪ್ರತಿಭಟನೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಅಂಪನ್‌ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳ ತತ್ತರಿಸಿದ್ದರೂ, ಸಹಜಸ್ಥಿತಿಗೆ ತರುವತ್ತ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿ ಬಂಗಾಳದ ಜನತೆ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. 

ಕೋಲ್ಕತ್ತದ ಕೆಲವು ಭಾಗಗಳಲ್ಲಿ ಮಾತ್ರ ವಿದ್ಯುತ್‌ ಹಾಗೂ ಮೊಬೈಲ್‌ ಸಂಪರ್ಕವಿದೆ. ಹಲವು ಪ್ರದೇಶಗಳು ಕತ್ತಲಿನಲ್ಲಿಯೇ ಉಳಿದಿವೆ. ಹೌರಾ, ಉತ್ತರ ಮತ್ತು ದಕ್ಷಿಣ ಭಾಗದ 24 ಪರಗಣ ಜಿಲ್ಲೆಗಳ  ರಸ್ತೆಗಳು ಜಲಾವೃತಗೊಂಡಿವೆ. ಅದನ್ನು ಸರಿ ಮಾಡುವತ್ತ ಗಮನ ಹರಿಸದ ಸರ್ಕಾರದ ವಿರುದ್ಧ ನಾಗರಿಕರು ಘೋಷಣೆ ಕೂಗಿದ್ದಾರೆ. 

ಕೂಡಲೇ ವಿದ್ಯುತ್‌ ಹಾಗೂ ನೀರು ಪೂರೈಕೆ ಸಮರ್ಪಕವಾಗಿರುವಂತೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಕೋಲ್ಕತ್ತ ನಗರ ಆಡಳಿತ ಮಂಡಳಿಯ ಅಧ್ಯಕ್ಷ ಫಿರ್ಹಾದ್‌ ಹಕೀಂ, ‘ವಾರದೊಳಗೆ ಜನಜೀವನ ಸಹಜ ಸ್ಥಿತಿಯತ್ತ ತರಲು ಎಲ್ಲ ಸರ್ಕಾರಿ ಅಧಿಕಾರಿಗಳು ಶ್ರಮ ವಹಿಸಲಿದ್ದಾರೆ’ ಎಂದು ಭರವಸೆ ನೀಡಿದ್ದಾರೆ. 

ಸತ್ತವರ ಸಂಖ್ಯೆ 85ಕ್ಕೆ ಏರಿಕೆಯಾಗಿದ್ದು, 1.5 ಕೋಟಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಮಾನ್ಯ ಜನ ಜೀವನವು ಅಸ್ತವ್ಯಸ್ತಗೊಂಡಿದ್ದು, 10 ಲಕ್ಷಕ್ಕೂ ಹೆಚ್ಚು ಮನೆಗಳು ನಾಶಗೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು