ಶುಕ್ರವಾರ, ಜೂನ್ 18, 2021
24 °C

ಒಡಿಶಾ, ಪಶ್ಚಿಮ ಬಂಗಾಳಕ್ಕೆ ಚಂಡಮಾರುತ ಸಾಧ್ಯತೆ: ನೆರವಿಗೆ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಬಂಗಾಳದ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ಭಾನುವಾರ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸಂಭಾವ್ಯ ಚಂಡಮಾರುತ ಎದುರಿಸಲು ಒಡಿಶಾ ಮತ್ತು ಪಶ್ಚಿಮ ಬಂಗಾಳದ ಸಿದ್ಧತೆಯನ್ನು  ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿ (ಎನ್‌ಸಿಎಂಸಿ) ಪರಿಶೀಲಿಸಿದೆ.

ಕೇಂದ್ರ ಸಂಪುಟದ ಕಾರ್ಯದರ್ಶಿ ರಾಜೀವ್‌ ಗೌಬಾ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಎನ್‌ಸಿಎಂಸಿ ಸಭೆ ನಡೆಯಿತು. 

ಪ್ರಸ್ತುತ ಪರಿಸ್ಥಿತಿ ಮತ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಸಿದ್ಧತೆಯ ಕುರಿತು ಮಾಹಿತಿ ಪಡೆದ ರಾಜೀವ್‌ ಗೌಬಾ ಅವರು, ತಕ್ಷಣದ ಸಹಾಯವನ್ನು ಒದಗಿಸುವಂತೆ ನಿರ್ದೇಶಿಸಿದರು. 

ಭಾರಿ ಮಳೆ, ಗಾಳಿಯ ಜೊತೆಗೆ ಅಲೆಗಳ ಅಬ್ಬರ ತೀವ್ರವಾಗುವ ನಿರೀಕ್ಷೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ರಾಜ್ಯ ಸರ್ಕಾರ ಸೂಚಿಸಿದೆ.

 

 

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು