ಗುರುವಾರ , ಜುಲೈ 29, 2021
20 °C

ನಿಸರ್ಗಾ ಚಂಡಮಾರುತ: 100 ಕಿ.ಮೀ ವೇಗದಲ್ಲಿ ಗಾಳಿ, ಮುಂಬೈಗೆ ರೆಡ್‌ ಅಲರ್ಟ್‌ ಘೋಷಣೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಮಂಗಳವಾರ ಬೆಳಿಗ್ಗೆ ಹವಾಮಾನ ಇಲಾಖೆಯಿಂದ ಮುಂಬೈನಲ್ಲಿ ‘ರೆಡ್ ಅಲರ್ಟ್’ ಹೊರಡಿಸಲಾಗಿದ್ದು, ನಿಸರ್ಗಾ ಚಂಡಮಾರುತವು ಬುಧವಾರ ಕರಾವಳಿಗೆ ಅಪ್ಪಳಿಸಲಿದ್ದು, 100 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

ಲಕ್ಷದ್ವೀಪ ಪ್ರದೇಶದ ಸಮೀಪ ಆಗ್ನೇಯ ಮತ್ತು ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲಿನ ವಾಯುಭಾರ ಕುಸಿತವು ತೀವ್ರ ಚಂಡಮಾರುತಕ್ಕೆ ಬದಲಾಗುವ ನಿರೀಕ್ಷೆಯಿದ್ದು, ಮುಂಬೈ ಮತ್ತು ಪಕ್ಕದ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ  ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಚಂಡಮಾರುತವನ್ನು ಎದುರಿಸುವಲ್ಲಿ ರಾಜ್ಯದ ಸಿದ್ಧತೆ ಕುರಿತು ಚರ್ಚಿಸಿದ್ದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್‌ಡಿಆರ್‌ಎಫ್) ಈಗಾಗಲೇ ರಾಜ್ಯಾಂದ್ಯಂತ ಚಂಡಮಾರುತದ ಹೊಡೆತಕ್ಕೆ ಸಿಲುಕುವ ಪ್ರದೇಶಗಳಲ್ಲಿ ಹಲವಾರು ರಕ್ಷಣಾ ತಂಡಗಳನ್ನು ನಿಯೋಜಿಸಿದೆ. ಮುಂಬೈನಲ್ಲಿ ಮೂರು ತಂಡಗಳು, ಪಾಲ್ಘರ್‌ನಲ್ಲಿ ಎರಡು ಮತ್ತು ಥಾಣೆ, ರಾಯ್‌ಗಡ್, ರತ್ನಾಗಿರಿ ಮತ್ತು ಸಿಂಧುದರ್ಗ್‌ನಲ್ಲಿ ತಲಾ ಒಂದು ತಂಡಗಳು ಕಾರ್ಯನಿರ್ವಹಿಸಲಿವೆ.

ನಿಸರ್ಗಾ ತೀವ್ರ ಚಂಡಮಾರುತವಾಗಿದ್ದು, ಇದರಿಂದ 90-100 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದೆಂದು ನಾವು ನಿರೀಕ್ಷಿಸುತ್ತಿದ್ದೇವೆ. ಇದು ಕೇವಲ ಅಂದಾಜು. ಹಾಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ನಾವು ಎರಡು ರಾಜ್ಯಗಳ (ಮಹಾರಾಷ್ಟ್ರ ಮತ್ತು ಗುಜರಾತ್) ಕರಾವಳಿ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಎಸ್.ಎನ್. ಪ್ರಧಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳ ಆದೇಶದ ಮೇಲೆರೆ ಆಯಾ ಜಿಲ್ಲಾಧಿಕಾರಿಗಳು ಎಲ್ಲ ಮೀನುಗಾರರು ಸಮುದ್ರ ತೀರದಿಂದ ಮರಳುವಂತೆ ತಿಳಿಸಲಾಗಿದೆ. ವಿದ್ಯುತ್ ಸರಬರಾಜಿನಲ್ಲಿ ಅಡ್ಡಿ ಉಂಟಾಗದಂತೆ ನೋಡಿಕೊಳ್ಳಲು ವ್ಯಾಪಕ ಕ್ರಮ ಕೈಗೊಳ್ಳಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು