ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಜಾ ಪ್ರಭಾವ ತಗ್ಗಿದರೂ 33ಕ್ಕೆ ಏರಿದ ಸಾವು, ಯುದ್ಧೋಪಾದಿಯಲ್ಲಿ ಪರಿಹಾರ ಕಾರ್ಯ

ವಿದ್ಯುತ್ ಜಾಲಕ್ಕೆ ಭಾರಿ ಹಾನಿ
Last Updated 17 ನವೆಂಬರ್ 2018, 16:05 IST
ಅಕ್ಷರ ಗಾತ್ರ

ಚೆನ್ನೈ/ಸೇಲಂ: ಗಾಜಾ ಚಂಡಮಾರುತಕ್ಕೆ ಸಂಬಂಧಿಸಿದ ಅವಘಡಗಳಲ್ಲಿ ಸತ್ತವರ ಸಂಖ್ಯೆ ಶನಿವಾರ 33ಕ್ಕೆ ಏರಿಕೆಯಾಗಿದೆ. ಚಂಡಮಾರುತದ ತೀವ್ರತೆ ತಗ್ಗಿದ್ದರೂ ತಮಿಳುನಾಡಿನ ಹಲವೆಡೆ ಭಾರಿ ಮಳೆ ಮುಂದುವರೆದಿದೆ.

‘ಚಂಡಮಾರುತ ಪ್ರವೇಶಿಸುವ ಮುನ್ನವೇ 82,000 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಿದ್ದೆವು. ಹೀಗಾಗಿ ಪ್ರಾಣಹಾನಿಯ ಪ್ರಮಾಣ ಕಡಿಮೆ ಇದೆ. ಬಿರುಗಾಳಿಯಿಂದ ಹಾನಿಯಾಗಿರುವ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ’ ಎಂದು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಹೇಳಿದ್ದಾರೆ.

ರಕ್ಷಣಾ ಕಾರ್ಯಕ್ಕೆ ನೌಕಾಪಡೆಯ ಹೆಲಿಕಾಪ್ಟರ್‌ ಮತ್ತು ದೋಣಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಮಳೆಯಿಂದ ಆಗಿರುವ ಹಾನಿಯ ಸಮೀಕ್ಷೆ ನಡೆಸಲೂ ನೌಕಾಪಡೆಯ ಹೆಲಿಕಾಪ್ಟರ್‌ ಅನ್ನು ಬಳಿಸಿಕೊಳ್ಳಲಾಗುತ್ತಿದೆ.

ಪುದುಚೇರಿಯಲ್ಲೂ ಹಾನಿ:ಗಾಜಾ ಚಂಡಮಾರುತದಿಂದ ಪುದುಚೇರಿಯಲ್ಲೂ ಹಾನಿಯಾಗಿದೆ. ಪರಿಹಾರ ಕಾರ್ಯದಲ್ಲಿ ನೆರವಾಗುವಂತೆ ಪುದುಚೇರಿ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT