ಶುಕ್ರವಾರ, ಸೆಪ್ಟೆಂಬರ್ 17, 2021
29 °C

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಚಂಡಮಾರುತ ಸಾಧ್ಯತೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮಹಾರಾಷ್ಟ್ರ ಮತ್ತು ಗುಜರಾತ್‌ ತೀರಕ್ಕೆ ಇದೇ 3ರಂದು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಮುಂಬೈನ ಪ್ರಾದೇಶಿಕ ಹವಾಮಾನ ಕೇಂದ್ರ ಭಾನುವಾರ ಎಚ್ಚರಿಕೆ ನೀಡಿದೆ.

‘ಆಗ್ನೇಯ ಮತ್ತು ಪೂರ್ವ ಮಧ್ಯ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದೆ’ ಎಂದೂ ಟ್ವೀಟ್‌ ಮಾಡಿದೆ.

ಮೀನುಗಾರರಿಗೆ ಎಚ್ಚರಿಕೆ: ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಗುಜರಾತ್‌ನ ಉತ್ತರ ಮತ್ತು ದಕ್ಷಿಣ ತೀರದಿಂದ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿರುವವರು ಮರಳಬೇಕು ಮತ್ತು ಜೂನ್‌ 4ರವರೆಗೆ ಸಮುದ್ರಕ್ಕಿಳಿಯಬಾರದು ಎಂದು ಅಹಮದಾಬಾದ್‌ನ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು