ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗಿ ಆದಿತ್ಯನಾಥ ವಜಾಕ್ಕೆ ಆಗ್ರಹ

Last Updated 26 ಮೇ 2020, 19:56 IST
ಅಕ್ಷರ ಗಾತ್ರ

ಬೆಂಗಳೂರು: ‘ಉತ್ತರ ಪ್ರದೇಶ ಕಾರ್ಮಿಕರು ಅನ್ಯ ರಾಜ್ಯಗಳಿಗೆ ಹೋಗಿ ಕೆಲಸ ಮಾಡುವಂತಿಲ್ಲ ಎಂದು ನಿರ್ದೇಶಿಸುವ ಮೂಲಕ ಈ ದೇಶದ ಒಕ್ಕೂಟ ವ್ಯವಸ್ಥೆ ಹಾಗೂ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತಂದಿರುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ವಜಾ ಮಾಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

‘ನಮ್ಮ ಸಂವಿಧಾನದ ವಿಧಿ 19(1)(ಡಿ) ಮತ್ತು (ಈ) ಪ್ರಕಾರ ದೇಶದ ಪ್ರತಿಯೊಬ್ಬ ನಾಗರಿಕ ಯಾವುದೇ ಜಾಗಕ್ಕೆ ಹೋಗಿ, ನೆಲೆಸಿ, ಕೆಲಸ ಮಾಡುವ ಹಕ್ಕನ್ನು ನೀಡಲಾಗಿದೆ. ಹೊರ ರಾಜ್ಯಗಳಿಂದ ತಮ್ಮ ರಾಜ್ಯಕ್ಕೆ ವಾಪಸಾಗುತ್ತಿರುವ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ವಿಫಲವಾಗಿರುವ ಆದಿತ್ಯನಾಥ ಅವರು ಈ ರೀತಿಯ ಉದ್ಧಟತನದ ನಿರ್ಧಾರಕ್ಕೆ ಬಂದಿದ್ದಾರೆ’ ಎಂದು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಯೋಗಿ ಆದಿತ್ಯನಾಥ ಅವರ ನಡೆ ಸರ್ವಾಧಿಕಾರಿ ಧೋರಣೆಯದ್ದಾಗಿದ್ದು, ಪ್ರಜಾತಂತ್ರ ವ್ಯವಸ್ಥೆಯ ಭದ್ರ ಬುನಾದಿಯನ್ನು ಅಲ್ಲಾಡಿಸುವಂಥದ್ದಾಗಿದೆ. ಕಾರ್ಮಿಕರನ್ನು ಅವರು ಗುಲಾಮರೆಂದು ಭಾವಿಸಿದ್ದಾರೆಯೇ? ಕೇಂದ್ರದಲ್ಲಿ ಹಾಗೂ ವಿವಿಧ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ಸರ್ವಾಧಿಕಾರಿ ಧೋರಣೆ ತೋರುತ್ತಾ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರುತ್ತಿವೆ’ ಎಂದು ದೂರಿದರು.

‘ಆದಿತ್ಯನಾಥ ಅವರನ್ನುಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡದಿದ್ದರೆ ದೇಶದಾದ್ಯಂತ ಉಗ್ರ ಹೋರಾಟ ರೂಪಿಸುವುದು ಅನಿವಾರ್ಯವಾಗುತ್ತದೆ’ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT