ಶಾಲಾ ಆವರಣದಲ್ಲಿ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳವಾರ, ಏಪ್ರಿಲ್ 23, 2019
31 °C
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊ

ಶಾಲಾ ಆವರಣದಲ್ಲಿ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

Published:
Updated:

ಲಖನೌ: ನಾಲ್ವರು ಯುವಕರು ದಲಿತ ಬಾಲಕಿ ಮೇಲೆ ಶಾಲಾ ಆವರಣದಲ್ಲಿಯೇ ಲೈಂಗಿಕ ದೌರ್ಜನ್ಯ ನಡೆಸಿರುವ  ಘಟನೆ ಉತ್ತರ ಪ್ರದೇಶದ ಮೀರತ್‌ ಜಿಲ್ಲೆಯಲ್ಲಿ ನಡೆದಿದೆ. 

ಜಿಲ್ಲೆಯ ಕಿಥೌರ್‌ನಲ್ಲಿ 10ನೇ ತರಗತಿಯ ಪರೀಕ್ಷೆ ಬರೆಯಲು ತೆರಳುತ್ತಿದ್ದ ಸಂದರ್ಭದಲ್ಲಿ ಯುವಕರು ಬಾಲಕಿಯನ್ನು ಹಿಡಿದು ದೌರ್ಜನ್ಯ ನಡೆಸಿದ್ದಾರೆ.

ಈ ಕೃತ್ಯವನ್ನು ಯುವಕರು ವಿಡಿಯೊ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಾಲಕಿಯನ್ನು ಬಲವಂತವಾಗಿ ನಿರ್ಜನ ಪ್ರದೇಶದಲ್ಲಿರುವ ಶಾಲೆಗೆ ಕರೆದೊಯ್ಯುವ ಯುವಕರು, ಆಕೆಯ ಮೇಲೆ ದೌರ್ಜನ್ಯ ನಡೆಸುತ್ತಾರೆ.ಆ ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾದ ಬಾಲಕಿ, ಜನನಿಬಿಡ ಪ್ರದೇಶಕ್ಕೆ ಬರುತ್ತಾಳೆ. ಬಾಲಕಿ ಪರಾರಿಯಾದರೂ, ವಿಡಿಯೊ ನಮ್ಮ ಬಳಿ ಇರುವುದರಿಂದ ತನ್ನನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಯುವಕರು ಹೇಳಿರುವ ದೃಶ್ಯವೂ ವಿಡಿಯೊದಲ್ಲಿದೆ. 

ಕೆಲವು ದಿನಗಳ ಹಿಂದೆ ಈ ಕೃತ್ಯ ನಡೆದಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.  ಇತರರ ಬಂಧನಕ್ಕೆ ಬಲೆ ಬೀಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !