ಗುರುವಾರ , ಮೇ 26, 2022
25 °C

ಮೇಲ್ಜಾತಿಯವರ ಜಮೀನಿನಲ್ಲಿ ಮಲವಿಸರ್ಜಿಸಿದ್ದಕ್ಕೆ ಗುಂಪು ಹಲ್ಲೆ: ದಲಿತ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಚೆನ್ನೈ: ಮೇಲ್ಜಾತಿಯ ವ್ಯಕ್ತಿಯೊಬ್ಬರಿಗೆ ಸೇರಿದ ಖಾಲಿ ಜಮೀನಿನಲ್ಲಿ ಮಲವಿಸರ್ಜನೆ ಮಾಡಿದ ಎನ್ನುವ ಕಾರಣಕ್ಕಾಗಿ ತಮಿಳುನಾಡಿನ ದಕ್ಷಿಣ ಚೆನ್ನೈನ ವಿಲ್ಲುಪುರಂ ಪಟ್ಟಣದಲ್ಲಿ 24 ವರ್ಷದ ದಲಿತ ವ್ಯಕ್ತಿಯೊಬ್ಬನ ಮೇಲೆ ಜನರ ಗುಂಪು ಕ್ರೂರವಾಗಿ ಥಳಿಸಿದೆ.

ಫೆಬ್ರುವರಿ 12ರಂದು ಘಟನೆ ನಡೆದಿದ್ದು, ಸಂತ್ರಸ್ತನನ್ನು ಶಕ್ತಿವೇಲ್ ಎಂದು ಗುರುತಿಸಲಾಗಿದೆ. ವಿಲ್ಲುಪುರಂ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಶಕ್ತಿವೇಲ್ ಕೆಲಸ ಮಾಡುತ್ತಿದ್ದರು. ಸ್ಥಳೀಯರು ಥಳಿಸಿರುವ ದೃಶ್ಯಾವಳಿ ವಿಡಿಯೊದಲ್ಲಿ ಸೆರೆಯಾಗಿದೆ. 

ಘಟನೆ ಸಂಬಂಧ ಸಂತ್ರಸ್ತನ ತಂಗಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಹಲ್ಲೆ ನಡೆಸಿರುವ ವಿಡಿಯೊ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೇಲ್ಜಾತಿಗೆ ಸೇರಿದ ಜಮೀನಿನಲ್ಲಿ ಮಲವಿಸರ್ಜನೆ ಮಾಡಿದ ನಂತರ ಅವನ ಮೇಲೆ ಹಲ್ಲೆ ನಡೆಸಲಾಯಿತು. ಆತ ದಲಿತ ಎಂದು ತಿಳಿದ ಬಳಿಕ ಹಿಂಸಾಚಾರಕ್ಕೆ ತಿರುಗಿದೆ. ತನ್ನನ್ನು ಕಾಪಾಡುವಂತೆ ಸೋದರ ನನಗೆ ಕರೆ ಮಾಡಿದ. ಸ್ಥಳಕ್ಕೆ ಬಂದು ಪೊಲೀಸರ ಸಹಾಯದಿಂದ ಶಕ್ತಿವೇಲ್‌ನನ್ನು ಕಾಪಾಡಿದೆ. ಆದರೆ ಮನೆಗೆ ತಲುಪುವ ಮುನ್ನವೇ ಪ್ರಜ್ಞೆ ಕಳೆದುಕೊಂಡಿದ್ದ ಶಕ್ತಿವೇಲ್, ವೈದ್ಯರು ಬರುವುದಕ್ಕೂ ಮುನ್ನವೇ ಕೊನೆಯುಸಿರೆಳೆದಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.

ಕೊಲೆ ಮತ್ತು ಎಸ್‌ಸಿ/ಎಸ್‌ಟಿ ವಿರುದ್ಧದ ದೌರ್ಜನ್ಯಗಳ ತಡೆಗಟ್ಟುವಿಕೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶುಕ್ರವಾರ ಏಳು ಜನರನ್ನು ಬಂಧಿಸಿದ್ದಾರೆ. 

ದಲಿತ ಸಂಘಟನೆಯ ವಿಸಿಕೆ ನಾಯಕ ತಿರುಮಾವಳನ್ ದುಃಖಿತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದು, ಅಪರಾಧಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು