ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರಿಗಳನ್ನು 6 ತಿಂಗಳೊಳಗೆ ಗಲ್ಲಿಗೇರಿಸಲು ಪ್ರಧಾನಿಗೆ ಪತ್ರ

ಅಪರಾಧಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ
Last Updated 3 ಡಿಸೆಂಬರ್ 2019, 18:30 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಅತ್ಯಾಚಾರಿಗಳಿಗೆ ಕಠಿಣ ಮತ್ತು ತ್ವರಿತ ಶಿಕ್ಷೆ ನೀಡಬೇಕು ಹಾಗೂ ಅಪರಾಧಿಗಳನ್ನು ಆರು ತಿಂಗಳೊಳಗೆ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಲ್ ಮಂಗಳವಾರದಿಂದ ಜಂತರ್‌ ಮಂತರ್‌ನಲ್ಲಿ ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದರು.

ಅಪರಾಧಿಗಳನ್ನು ಆರು ತಿಂಗಳೊಳಗೆ ಗಲ್ಲಿಗೇರಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದರು.

‘ಅತ್ಯಾಚಾರ ಪ್ರಕರಣಗಳಲ್ಲಿ ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸಬೇಕೆಂಬುದು ನಮ್ಮ ಬೇಡಿಕೆ. ಹೈದರಾಬಾದ್ ಪ್ರಕರಣದಲ್ಲಿ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಕಳೆದ ವರ್ಷ ನಾನು ಪ್ರತಿಭಟನೆ ಮಾಡಿದ ಹತ್ತು ದಿನಗಳೊಳಗೆ ಕೇಂದ್ರ ಸರ್ಕಾರ, ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದವರಿಗೆ ಆರು ತಿಂಗಳೊಳಗೆ ಮರಣ ದಂಡನೆ ವಿಧಿಸುವ ಕಾನೂನು ತಂದಿತು. ಆದರೆ, ಇದುವರೆಗೂ ಆ ಕಾನೂನು ಜಾರಿಗೆ ಬರಲೇ ಇಲ್ಲ. ಪ್ರಧಾನಿ ಅವರು ಈಗಲಾದರೂ ಈ ಕಾನೂನನ್ನು ಜಾರಿಗೆ ತರಬೇಕು’ ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಗೆ ಪೊಲೀಸರ ಅನುಮತಿ, ಗೊಂದಲ: ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದರು ಎಂದು ಸ್ವಾತಿ ಹೇಳಿದರು. ಆದರೆ, ಸ್ವಾತಿ ಅವರ ಬೇಡಿಕೆಯನ್ನು ತಿರಸ್ಕರಿಸಿಲ್ಲ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT