ಬಾಲಕಿಯರ ಅತ್ಯಾಚಾರಿಗಳಿಗೆ ಗಲ್ಲು: ಸಂಸತ್‌ ಒಪ್ಪಿಗೆ

7

ಬಾಲಕಿಯರ ಅತ್ಯಾಚಾರಿಗಳಿಗೆ ಗಲ್ಲು: ಸಂಸತ್‌ ಒಪ್ಪಿಗೆ

Published:
Updated:

ನವದೆಹಲಿ: 12 ವರ್ಷದೊಳಗಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಮಸೂದೆಗೆ ಸಂಸತ್ತಿನ ಉಭಯ ಸದನಗಳು ಸೋಮವಾರ ಒಪ್ಪಿಗೆ ನೀಡಿವೆ. 

ಜಮ್ಮು –ಕಾಶ್ಮೀರದ ಕಠುವಾದಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಹಾಗೂ ಉತ್ತರ ಪ್ರದೇಶದ ಉನ್ನಾವ್‌ದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳ ನಂತರ ಆರೋಪಿಗಳಿಗೆ ಕಠಿಣಶಿಕ್ಷೆ ವಿಧಿಸಬೇಕು ಎಂಬ ಆಗ್ರಹ ಕೇಳಿಬಂದಿತ್ತು. 

ಕ್ರಿಮಿನಲ್‌ ಕಾನೂನು (ತಿದ್ದುಪಡಿ) ಮಸೂದೆ 2018ಗೆ ಲೋಕಸಭೆ ಜುಲೈ 30ರಂದು ಒಪ್ಪಿಗೆ ನೀಡಿತ್ತು. ಇದೀಗ ರಾಜ್ಯಸಭೆಯಲ್ಲೂ ಧ್ವನಿಮತದ ಒಪ್ಪಿಗೆ ದೊರೆತಿದೆ.

ಬರಹ ಇಷ್ಟವಾಯಿತೆ?

  • 11

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !