ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ/ಎಸ್ಟಿಗೆ ಎಂಎಲ್ಎ, ಎಂಪಿ ಸ್ಥಾನ ಮೀಸಲಾತಿ: ವಿಸ್ತರಿಸಿದ ಮೋದಿ ಸರ್ಕಾರ

Last Updated 4 ಡಿಸೆಂಬರ್ 2019, 10:14 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳ ಸ್ಥಾನಗಳಿಗೆಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಂದಿನ ಹತ್ತು ವರ್ಷಗಳ ಕಾಲ ವಿಸ್ತರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ.

ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳಿಗೆ ನೀಡಲಾಗಿದ್ದ ಮೀಸಲಾತಿ ಅವಧಿಯು 25 ಜನವರಿ 2020 ಕ್ಕೆ ಕೊನೆಗೊಳ್ಳುವುದಿತ್ತು. ಆ ಕಾರಣ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರೆಯಲಾಗಿದ್ದ ಕೇಂದ್ರ ಸಚಿವ ಸಂಪುಟವು ಮೀಸಲಾತಿ ಮುಂದುವರಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಇದೇ ಸಂಸತ್‌ ಅಧಿವೇಶನದಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಂದಿನ ಹತ್ತು ವರ್ಷಗಳ ಕಾಲ ವಿಸ್ತರಿಸುವ ಮಸೂದೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಈಗಿರುವ ಕಾನೂನಿನ ಪ್ರಕಾರ, ಲೋಕಸಭೆಯ 543 ಸ್ಥಾನಗಳ ಪೈಕಿ 84 ಸ್ಥಾನಗಳು ಪರಿಶಿಷ್ಟ ಜಾತಿ, 47 ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ. ಇದರ ಜತೆಗೆ, 2 ಸ್ಥಾನಗಳು ಆಂಗ್ಲೋ-ಇಂಡಿಯನ್ ಸಮುದಾಯಕ್ಕೆ ಮೀಸಲಾಗಿದ್ದು, ಒಟ್ಟು ಸ್ಥಾನಗಳು 545.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT