ಮಾನನಷ್ಟ ಮೊಕದ್ದಮೆ: ಶಶಿ ತರೂರ್‌ಗೆ ದೆಹಲಿ ಕೋರ್ಟ್ ದಂಡ

ನವದೆಹಲಿ: ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹಾಜರಾಗದ ಕಾಂಗ್ರೆಸ್ ಮುಖಂಡ, ಸಂಸದ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ₹5 ಸಾವಿರ ದಂಡ ವಿಧಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಪ್ರಧಾನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶಾಲ್ ಅವರು, ‘ಹಿಂದೆ ಹಲವು ಬಾರಿ ನಿರ್ದೇಶನ ನೀಡಿದ್ದರೂ, ನ್ಯಾಯಾಲಯದ ಮುಂದೆ ಹಾಜರಾಗಲು ತರೂರ್ ವಿಫಲರಾಗಿದ್ದಾರೆ’ ಎಂದಿದ್ದಾರೆ.
‘ಶಶಿ ತರೂರ್ ಅವರು ಮೋದಿಯವರನ್ನು ಶಿವಲಿಂಗದ ಮೇಲಿನ ಚೇಳಿಗೆ ಹೋಲಿಸಿದ್ದರು. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ’ ಎಂದು ಆರೋಪಿಸಿ, ದೆಹಲಿ ಬಿಜೆಪಿ ನಾಯಕ ರಾಜೀವ್ ಬಬ್ಬರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.