ಗುರುವಾರ , ಜುಲೈ 29, 2021
20 °C

ದೇಶದ ರಕ್ಷಣಾ ಇಲಾಖೆಯ ಕಾರ್ಯದರ್ಶಿಗೆ ಕೋವಿಡ್-19 ರೋಗ ದೃಢ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

covid-19

ನವದೆಹಲಿ:ಭಾರತದ ರಕ್ಷಣಾ ಇಲಾಖೆ ಕಾರ್ಯದರ್ಶಿಗೆ ಕೋವಿಡ್-19 ರೋಗ ಇರುವುದು ದೃಢಪಟ್ಟಿದೆ. ಬುಧವಾರ ರಕ್ಷಣಾ ಸಚಿವಾಲಯದಲ್ಲಿ ಇವರೊಂದಿಗೆ ಒಡನಾಡಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.
 ಕಾರ್ಯದರ್ಶಿ ಅವರ ಆರೋಗ್ಯ ಸ್ಥಿರವಾಗಿದ್ದು, ಈಗ ಅವರು ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ.

ರೈಸಿನಾ ಹಿಲ್ಸ್‌ನ ದಕ್ಷಿಣ ಬ್ಲಾಕ್‌ನಲ್ಲಿರುವ  ಸಚಿವಾಲಯದ ಪ್ರಧಾನ ಕಚೇರಿಯಲ್ಲಿ 35 ಸಿಬ್ಬಂದಿಗಳು ಕಾರ್ಯವೆಸಗುತ್ತಿದ್ದಾರೆ. ಕಾರ್ಯದರ್ಶಿಗೆ ರೋಗ ದೃಢಪಟ್ಟಿರುವುದರಿಂದ ಅಲ್ಲಿದ್ದ ಸಿಬ್ಬಂದಿಗಳು ಹೋಮ್ ಕ್ವಾರಂಟೈನ್‌ನಲ್ಲಿರುವಂತೆ ಹೇಳಲಾಗಿದೆ.

ಕಾರ್ಯದರ್ಶಿ ಅವರ ಆರೋಗ್ಯ ಸ್ಥಿತಿ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಲಭ್ಯವಾಗಿಲ್ಲ. ರಕ್ಷಣಾ ಸಚಿವಾಲಯದ ವಕ್ತಾರ ಈ ಬಗ್ಗೆ ಮಾತನಾಡಲು  ನಿರಾಕರಿಸಿದ್ದಾರೆ. ಮುಂಜಾಗ್ರತಾ ದೃಷ್ಟಿಯಿಂದ  ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಬುಧವಾರ ಕಚೇರಿಗೆ ಬಂದಿಲ್ಲ ಎಂದು ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು