ನವದೆಹಲಿ:ದೆಹಲಿ ವಿಧಾನಸಭೆಯ ಒಟ್ಟು 70 ಸ್ಥಾನಗಳಿಗೆ ಬೆಳಗ್ಗೆ 8ರಿಂದ ಮತದಾನ ಆರಂಭವಾಗಿದ್ದು ಮಧ್ಯಾಹ್ನ 2 ಗಂಟೆ ವೇಳೆಗೆ ಶೇ27.48% ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 2015ರ ವಿಧಾನಸಭೆ ಚುನಾವಣೆಯಲ್ಲಿ ಶೇ67.12% ರಷ್ಟು ಮತದಾನವಾಗಿತ್ತು.

ಬೆಳಗ್ಗೆ ಮತದಾನ ಮಾಡಲು ಜನರು ನಿರಾಸಕ್ತಿ ತೋರಿದ್ದರು. 10 ಗಂಟೆ ಆಗುತ್ತಿದ್ದಂತೆ ಜನರು ಮತದಾನ ಮಾಡಲು ಮತಗಟ್ಟೆಗಳತ್ತ ಬಂದರು. ಆದಾಗ್ಯೂ ಮಧ್ಯಾಹ್ನ 2 ಗಂಟೆ ವೇಳೆಗೆ ಕೇವಲಶೇ 27.48% ರಷ್ಟು ಮತದಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಜೆ ವೇಳೆಗೆ ಮತದಾನ ಚುರುಕೊಗೊಳ್ಳಲಿದೆ ಎಂದು ವಿಶ್ವಾಸವನ್ನು ರಾಜಕೀಯ ನಾಯಕರ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಅರವಿಂದ ಕೇಜ್ರಿವಾಲ್ ಸೇರಿದಂತೆ ಬಿಜೆಪಿ, ಕಾಂಗ್ರೆಸ್ ಹಾಗೂ ಎಎಪಿ ಪಕ್ಷದ ಹಿರಿಯ ಮುಖಂಡರು ಮತದಾನ ಮಾಡಿದ್ದಾರೆ.

ಒಟ್ಟು 1,47,86,382ಮತದಾರರಿದ್ದು, 2,689 ಕೇಂದ್ರಗಳ13,750 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಇದರಲ್ಲಿ 516 ಕೇಂದ್ರ ಹಾಗೂ 3,704 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಒಟ್ಟು 672 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಭದ್ರತೆಗಾಗಿ40,000 ರಕ್ಷಣಾ ಸಿಬ್ಬಂದಿ,19,000 ಗೃಹ ರಕ್ಷಣಾ ದಳ ಸಿಬ್ಬಂದಿ, ಕೇಂದ್ರ ಸಶಸ್ತ್ರ ಮೀಸಲು ಪಡೆಯ 190 ಪಡೆಗಳನ್ನು ನಿಯೋಜಿಸಲಾಗಿದೆ.

ಕಳೆದ ಚುನಾವಣೆಯಲ್ಲಿ67 ಕ್ಷೇತ್ರಗಳನ್ನು ಗೆದ್ದು ಅಧಿಕಾರಕ್ಕೇರಿದ್ದ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿಗೆ ಈ ಬಾರಿ ಬಿಜೆಪಿ ಪ್ರಬಲ ಪೈಪೋಟಿ ನೀಡಲಿದೆ ಎನ್ನಲಾಗಿದೆ.

ಎಎಪಿ 70 ಸ್ಥಾನಗಳಲ್ಲಿ ಸ್ಫರ್ಧೆ ಮಾಡಿದೆ, ಬಿಜೆಪಿ 67ರಲ್ಲಿ ಸ್ಪರ್ಧಿಸಿ 3 ಸ್ಥಾನಗಳನ್ನು ಮಿತ್ರ ಪಕ್ಷಗಳಾದ ಜೆಡಿಯು ಮತ್ತು ಎಲ್ಜೆಪಿಗೆ ಬಿಟ್ಟುಕೊಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.