ಗುರುವಾರ , ಸೆಪ್ಟೆಂಬರ್ 16, 2021
29 °C

ಬಹಿರಂಗ ಪ್ರಚಾರ ಅವಧಿ ಮಗಿದ ನಂತರವೂ ಚುನಾವಣಾ ಪ್ರಚಾರ: ಬಿಜೆಪಿಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾದ ನಂತರವೂ ‘ನಮೋ ಟಿ.ವಿ.’ಯಲ್ಲಿ ಚುನಾವಣಾ ಪ್ರಚಾರದ ಕಾರ್ಯಕ್ರಮ ಪ್ರಸಾರ ಮಾಡಿದ್ದಕ್ಕಾಗಿ ಬಿಜೆಪಿಗೆ ದೆಹಲಿಯ ಮುಖ್ಯ ಚುನಾವಣಾಧಿಕಾರಿ ನೋಟಿಸ್‌ ಜಾರಿ ಮಾಡಿದ್ದಾರೆ.

‘ಶುಕ್ರವಾರ ಬೆಳಿಗ್ಗೆ 6ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿತ್ತು. ನಮೋ ಟಿ.ವಿ.ಯಲ್ಲಿ ಆ ನಂತರವೂ ಚುನಾವಣಾ ಪ್ರಚಾರ ಮಾಡಿದ ಕಾರಣಕ್ಕೆ ನೋಟಿಸ್ ಜಾರಿ ಮಾಡಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಏಪ್ರಿಲ್‌ ತಿಂಗಳಲ್ಲಿಯೂ ಪೂರ್ವ ಪ್ರಮಾಣೀಕೃತವಲ್ಲದ ಕಾರ್ಯಕ್ರಮಗಳನ್ನು ನಮೋ ಟಿ.ವಿ.ಯಲ್ಲಿ ಪ್ರಸಾರ ಮಾಡಿದ ಬಳಿಕ ಬಿಜೆಪಿಗೆ ಆಯೋಗ ಎಚ್ಚರಿಕೆ ನೀಡಿ, ಎಲ್ಲ ಕಾರ್ಯಕ್ರಮ ಪ್ರಸಾರಕ್ಕೂ ಮುನ್ನ ಚುನಾವಣಾ ಆಯೋಗದ ಮಾಧ್ಯಮ ಸಮಿತಿಯ ಪೂರ್ವಾನುಮತಿ ಪಡೆಯಬೇಕು ಎಂದು ಸೂಚನೆ ನೀಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು