ಶನಿವಾರ, ಜೂನ್ 19, 2021
22 °C
ಶಾಂತಿ ಕಾಪಾಡಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ

1984ರಂತೆ ಮತ್ತೊಂದು ಘಟನೆ ನಡೆಯಲು ಬಿಡಲಾರೆವು: ದೆಹಲಿ ಹೈಕೋರ್ಟ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Firefighters attempt to douse fire in a burning shop following clashes over the new citizenship law, in Gokulpuri area of northeast Delhi

ನವದೆಹಲಿ: 1984ರ ಸಿಖ್ ವಿರೋಧಿ ಗಲಭೆಯಂತೆ ಮತ್ತೊಂದು ಘಟನೆ ದೇಶದಲ್ಲಿ ನಡೆಯಲು ಬಿಡುವುದಿಲ್ಲ ಎಂದು ದೆಹಲಿ ಹೈಕೋರ್ಟ್‌ ಬುಧವಾರ ಹೇಳಿದೆ.

ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದ ವಿಚಾರಣೆ ವೇಳೆ, ‘1984ರಲ್ಲಿ ಆದಂತೆ ಇನ್ನೊಂದು ಘಟನೆ ನಡೆಯಲು ಬಿಡಲಾರೆವು. ಗುಪ್ತಚರ ದಳದ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆದಿದೆ ಎಂಬ ವಿಚಾರ ತಿಳಿಯಿತು. ಇಂತಹ ಘಟನೆಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು’ ಎಂದು ನ್ಯಾಯಮೂರ್ತಿ ಮುರಳೀಧರ್ ಅವರು ಹೇಳಿದರು.

ಇದನ್ನೂ ಓದಿ: 

ಬಿಜೆಪಿ ನಾಯಕ ಕಪಿಲ್ ಮಿಶ್ರಾ ನೀಡಿದ್ದಾರೆ ಎನ್ನಲಾದ ವಿವಾದಿತ ಹೇಳಿಕೆಗೆ ಸಂಬಂಧಿಸಿದ ವಿಡಿಯೊವನ್ನೂ ಕೋರ್ಟ್‌ ಪರಿಶೀಲನೆ ನಡೆಸಿದೆ.

ಗಲಭೆ ಪೀಡಿತ ಪ್ರದೇಶಗಳಿಗೆ ತೆರಳಿ ಜನರಲ್ಲಿ ವಿಶ್ವಾಸ ವೃದ್ಧಿಸುವ ಕೆಲಸ ಮಾಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಗಾಯಾಳುಗಳನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡುವಂತೆ ಪೊಲೀಸರಿಗೆ ಸೂಚಿಸಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರ: ಶಾಂತಿ ಕಾಪಾಡಲು ಪ್ರಧಾನಿ ನರೇಂದ್ರ ಮೋದಿ ಮನವಿ

ಕಳೆದ ಮೂರು ದಿನಗಳಲ್ಲಿ ದೆಹಲಿಯ ಹಲವೆಡೆ ನಡೆದ ಹಿಂಸಾಚಾರದಲ್ಲಿ 20 ಜನ ಮೃತಪಟ್ಟಿದ್ದಾರೆ. ಸುಮಾರು 180 ಜನ ಗಾಯಗೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು