ಭಾನುವಾರ, ಫೆಬ್ರವರಿ 23, 2020
19 °C

ದೆಹಲಿ ವಿಧಾನಸಭಾ ಚುನಾವಣೆ: ನಾಮಪತ್ರ ಸಲ್ಲಿಕೆಗೆ 6 ಗಂಟೆ ಕಾದ ಕೇಜ್ರಿವಾಲ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ನವದೆಹಲಿ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ನಾಮಪತ್ರ ಸಲ್ಲಿಸಲು ಮಂಗಳವಾರ ಸುಮಾರು ಆರು ಗಂಟೆಗಳ ಕಾಲ ಕಾಯಬೇಕಾಯಿತು.

ಸೋಮವಾರ ನಡೆದ ರೋಡ್‌ ಷೋ ವಿಳಂಬವಾಗಿದ್ದರಿಂದ ನಾಮಪತ್ರ ಸಲ್ಲಿಸುವುದು ಕೇಜ್ರಿವಾಲ್‌ಗೆ ಸಾಧ್ಯವಾಗಿರಲಿಲ್ಲ. ಆದರೆ, ಮಂಗಳವಾರ ಚುನಾವಣಾಧಿಕಾರಿ ಕಚೇರಿಗೆ ಬಂದಾಗ ಅಚ್ಚರಿ ಕಾದಿತ್ತು. ಹಲವರು ಸರದಿಯಲ್ಲಿದ್ದರು. ಕೇಜ್ರಿವಾಲ್‌ 45ನೇಯವರಾಗಿದ್ದರು. ಹೀಗಾಗಿ, ಸಂಜೆ 6.30ರ ಸುಮಾರಿಗೆ ನಾಮಪತ್ರ ಸಲ್ಲಿಸಿದರು.

ಮಧ್ಯಾಹ್ನ ಈ ಬಗ್ಗೆ ಟ್ವೀಟ್‌ ಮಾಡಿದ ಕೇಜ್ರಿವಾಲ್‌, ‘ನಾಮಪತ್ರ ಸಲ್ಲಿಸಲು ಕಾಯುತ್ತಿದ್ದೇನೆ. ನನ್ನ ಟೋಕನ್‌ ಸಂಖ್ಯೆ 45. ಇಲ್ಲಿ ನಾಮಪತ್ರ ಸಲ್ಲಿಸಲು ಹಲವರು ಬಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹಲವು ಮಂದಿ ಪಾಲ್ಗೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗಿದೆ’ ಎಂದಿದ್ದರು.

ಯುವ ಮೋರ್ಚಾ ಅಧ್ಯಕ್ಷ ಕಣಕ್ಕೆ: ವೃತ್ತಿಯಲ್ಲಿ ವಕೀಲರಾದ ಯುವ ಮೋರ್ಚಾ ಅಧ್ಯಕ್ಷ ಸುನಿಲ್‌ ಯಾದವ್‌ ಅವರನ್ನು ಕೇಜ್ರಿವಾಲ್‌ ವಿರುದ್ಧ ಬಿಜೆಪಿ ಕಣಕ್ಕಿಳಿಸಿದೆ. ಕಾಂಗ್ರೆಸ್‌ನಿಂದ ರೊಮೇಶ್‌ ಸಭರ್‌ವಾಲ್‌ ನಾಮಪತ್ರ ಸಲ್ಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು