ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಕಾಂಗ್ರೆಸ್‌ನಲ್ಲಿ ಭಿನ್ನಮತ

Last Updated 29 ಜೂನ್ 2019, 19:11 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಕಾಂಗ್ರೆಸ್ ಘಟಕದ 280 ಬ್ಲಾಕ್ ಮಟ್ಟದ ಸಮಿತಿಗಳನ್ನು ವಿಸರ್ಜನೆಗೊಳಿಸಿದ್ದ ದೆಹಲಿ ಕಾಂಗ್ರೆಸ್ ಮುಖ್ಯಸ್ಥೆ ಶೀಲಾ ದೀಕ್ಷಿತ್ ಅವರ ನಿರ್ಧಾರವನ್ನು ಎಐಸಿಸಿ ದೆಹಲಿ ಉಸ್ತುವಾರಿ ಪಿ.ಸಿ. ಚಾಕೋ ಅವರು ಅನೂರ್ಜಿತಗೊಳಿಸಿದ್ದು, ಇಬ್ಬರು ನಾಯಕರ ನಡುವಿನ ಭಿನ್ನಮತ ಬಯಲಾಗಿದೆ.

ಶೀಲಾ ಹಾಗೂ ಚಾಕೋ ಅವರು ಶುಕ್ರವಾರವಷ್ಟೇ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಮುಂಬರುವ ವಿಧಾನಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸುವಂತೆ ಅವರು ಸಲಹೆ ನೀಡಿದ್ದರು. ಲೋಕಸಭೆ ಚುನಾವಣೆ ಸೋಲಿನ ಕುರಿತು ಸಲ್ಲಿಕೆಯಾಗಿದ್ದ ವರದಿಯನ್ನು ಪರಿಗಣಿಸಿ ಶೀಲಾ ಈ ಕ್ರಮಕ್ಕೆ ಮುಂದಾಗಿದ್ದರು. ಈ ಕ್ರಮವನ್ನು ಕಾಂಗ್ರೆಸ್‌ನ ಕೆಲವು ಮುಖಂಡರು ಆಕ್ಷೇಪಿಸಿ, ದೂರು ಸಲ್ಲಿಸಿದ್ದರು.

ಪ್ರತಾಪ್ ಬಾಜ್ವಾ ರಾಜೀನಾಮೆ (ಚಂಡೀಗಡ ವರದಿ): ಎಐಸಿಸಿ ವಿದೇಶಾಂಗ ವ್ಯವಹಾರಗಳ ವಿಭಾಗದ ಉಪಮುಖ್ಯಸ್ಥ ಪ್ರತಾಪ್ ಸಿಂಗ್ ಬಾಜ್ವಾ ಅವರು ತಮ್ಮ ಹುದ್ದೆಗೆ ಶನಿವಾರ ರಾಜೀನಾಮೆ ನೀಡಿದ್ದಾರೆ.

ಸಾಮೂಹಿಕ ರಾಜೀನಾಮೆ: (ಲಖನೌ ವರದಿ): ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ 36 ಮುಖಂಡರು ಶನಿವಾರ ರಾಜೀನಾಮೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT