ಸೋಮವಾರ, ಫೆಬ್ರವರಿ 17, 2020
24 °C

ದೆಹಲಿ ಚುನಾವಣಾ ಫಲಿತಾಂಶ: ಇವಿಎಂ ಬಗ್ಗೆ ದಿಗ್ವಿಜಯ್ ಸಿಂಗ್ ಅನುಮಾನ

ಪಿಟಿಐ Updated:

ಅಕ್ಷರ ಗಾತ್ರ : | |

Digvijaya Singh

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ಮತ ಎಣಿಕೆ ಪ್ರಗತಿಯಲ್ಲಿರುವಾಗಲೇ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಇವಿಎಂ ಬಳಸುವ ಬಗ್ಗೆ ಸುಪ್ರೀಂ ಕೋರ್ಟ್‌ ಮತ್ತು ಚುನಾವಣಾ ಆಯೋಗ ಮತ್ತೊಮ್ಮೆ ಪರಿಶೀಲನೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

‘ಚಿಪ್ ಹೊಂದಿರುವ ಯಾವುದೇ ಯಂತ್ರವು ಟ್ಯಾಂಪರ್‌ಪ್ರೂಫ್ (ಹ್ಯಾಕ್‌ ಮಾಡಲು ಸಾಧ್ಯವಾಗದ್ದು) ಅಲ್ಲ. ದಯಮಾಡಿ ಒಂದು ಕ್ಷಣ ಯೋಚಿಸಿ, ಅಭಿವೃದ್ಧಿ ಹೊಂದಿದ ದೇಶಗಳು ಇವಿಎಂ ಬಳಸುತ್ತಿಲ್ಲ’ ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

‘ಭಾರತದ ಚುನಾವಣೆಗಳಲ್ಲಿ ಇವಿಎಂ ಬಳಸುವ ಬಗ್ಗೆ ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್‌ ಮತ್ತೊಮ್ಮೆ ಪರಿಶೀಲನೆ ನಡೆಸಲಿವೆಯೇ? ನಮ್ಮದು ಜಗತ್ತಿನಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ. 130 ಕೋಟಿ ಜನರ ಆದೇಶವನ್ನು ಕೆಲವೇ ಮಂದಿ ನಿರ್ಲಜ್ಜ ಜನರು ಹ್ಯಾಕ್‌ ಮಾಡಲು ಬಿಡಲಾಗದು’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು