ಮಂಗಳವಾರ, ಫೆಬ್ರವರಿ 25, 2020
19 °C

ದೆಹಲಿ ಚುನಾವಣೆ: ಶೇ.58 ರಷ್ಟು ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಆಮ್‌ ಆದ್ಮಿ ಪಾರ್ಟಿ (ಎಎಪಿ) ಹಾಗೂ ಬಿಜೆಪಿ ನಡುವಿನ ನೇರ ಹಣಾಹಣಿಯಿಂದಾಗಿ ದೇಶದ ಗಮನ ಸೆಳೆದಿದ್ದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಶನಿವಾರ 58 ರಷ್ಟು ಮತದಾನವಾಗಿದೆ.

ಕಳೆದ ಬಾರಿಗೆ ಹೋಲಿಸಿದರೆ ಮತದಾನ ಕಡಿಮೆ ಪ್ರಮಾಣದಲ್ಲಿ ನಡೆದಿದೆ. ಕಳೆದ ಬಾರಿ 67.5 ರಷ್ಟು ಮತದಾನವಾಗಿತ್ತು. ಶನಿವಾರ ಬೆಳಿಗ್ಗೆಯಿಂದ ಮತದಾರರಿಂದ ನಿರೀಕ್ಷಿತ ಮಟ್ಟದಲ್ಲಿ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಅಲ್ಲಲ್ಲಿ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ, ಶಾಂತಿಯುತವಾಗಿ ಮತದಾನ ಮುಗಿದಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಬೆಳಿಗ್ಗೆಯಿಂದಲೂ ರಾಷ್ಟ್ರ ರಾಜಧಾನಿಯ ಮತದಾರರು ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾವಣೆ ಮಾಡಲು ಉತ್ಸಾಹ ತೋರಲಿಲ್ಲ. ಮಧ್ಯಾಹ್ನ 3 ಗಂಟೆಗೆ ವರೆಗೆ ಕೇವಲ ಶೇ 41.5 ರಷ್ಟು ಮತ ಚಲಾವಣೆಯಾಗಿತ್ತು. 2015ರಲ್ಲಿ ಇದೇ ವೇಳೆಗೆ ಶೇ 51.2ರಷ್ಟು ಮತ ಚಲಾವಣೆಯಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು