ಭಾನುವಾರ, ಫೆಬ್ರವರಿ 23, 2020
19 °C

ಭಾರಿ ಅಂತರದಿಂದ ಎಎಪಿ ಗೆಲುವು: ಸಿಸೊಡಿಯಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷವು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಎಎಪಿ ಮುಖಂಡ ಹಾಗೂ ಉಪಮುಖ್ಯಮಂತ್ರಿ ಮನೀಶ್‌ ಸಿಸೊಡಿಯಾ ಶನಿವಾರ ಹೇಳಿದ್ದಾರೆ.

ಪಕ್ಷವು ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೇರಲಿದೆ ಎಂಬ ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ಬಹಿರಂಗಗೊಂಡ ಬೆನ್ನಲ್ಲೇ ಅವರು ಈ ಮಾತುಗಳನ್ನಾಡಿದ್ದಾರೆ. 

‘ಪಕ್ಷದ ಕಾರ್ಯಕರ್ತರ ನಡುವಿನ ಬಾಂಧವ್ಯ ಎಷ್ಟು ಸದೃಢವಾಗಿದೆ, ಕಾರ್ಯಕರ್ತರು ಸ್ವಾರ್ಥವಿಲ್ಲದೇ ಎಷ್ಟರ ಮಟ್ಟಿಗೆ ದುಡಿಯುತ್ತಾರೆ ಎಂಬುದಕ್ಕೆ ಈ ಚುನಾವಣೆಯೆ ಸಾಕ್ಷಿ. ಪಕ್ಷದ ಅಭ್ಯರ್ಥಿಗಳ ಪರವಾಗಿ ಹಗಲು–ರಾತ್ರಿ ಶ್ರಮಿಸಿರುವ ಎಲ್ಲ ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದೂ ಅವರು ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು