ಶನಿವಾರ, ಫೆಬ್ರವರಿ 29, 2020
19 °C
ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಮುಕೇಶ್ ಕುಮಾರ್ ಸಿಂಗ್

ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಿರ್ಭಯಾ ಅಪರಾಧಿ ಸುಪ್ರೀಂಗೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Supreme court

ನವದೆಹಲಿ: ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಯೊಬ್ಬ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾನೆ.

ಅಪರಾಧಿ ಮುಕೇಶ್ ಕುಮಾರ್ ಸಿಂಗ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ ಎಂದು ಆತನ ಪರ ವಕೀಲ ವೃಂದಾ ಗ್ರೋವರ್ ತಿಳಿಸಿದ್ದಾರೆ.

ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್ ಮತ್ತು ವಿನಯ್ ಕುಮಾರ್ ಶರ್ಮಾ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. ಬಳಿಕ ಇಬ್ಬರೂ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಅದೂ ತಿರಸ್ಕೃತಗೊಂಡಿತ್ತು. ಈ ಮಧ್ಯೆ, ಪ್ರಕರಣದ ಇನ್ನಿಬ್ಬರು ಅಪರಾಧಿಗಳಾದ ಅಕ್ಷಯ್ ಕುಮಾರ್ ಸಿಂಗ್ ಮತ್ತು ಪವನ್ ಸಿಂಗ್‌ ಪರ ಪರಿಹಾರಾತ್ಮಕ ಅರ್ಜಿ ಸಲ್ಲಿಸಲು ಬೇಕಿರುವ ದಾಖಲೆಗಳನ್ನು ತಿಹಾರ್ ಜೈಲು ಅಧಿಕಾರಿಗಳು ಇನ್ನೂ ನೀಡಿಲ್ಲ ಎಂದು ವಕೀಲ ಎ.ಪಿ.ಸಿಂಗ್ ಶುಕ್ರವಾರ ಆರೋಪಿಸಿದ್ದರು. ಈ ಬಗ್ಗೆ ಪಟಿಯಾಲಹೌಸ್ ಕೋರ್ಟ್‌ಗೆ ಅರ್ಜಿಯನ್ನೂ ಸಲ್ಲಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು