ಭಾನುವಾರ, ಜನವರಿ 19, 2020
23 °C

ನಿರ್ಭಯಾ ಅತ್ಯಾಚಾರ ಅಪರಾಧಿಗಳ ಪರಿಹಾರಾತ್ಮಕ ಅರ್ಜಿ ವಜಾ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಅಪರಾಧಿಗಳಿಬ್ಬರು ಗಲ್ಲು ಶಿಕ್ಷೆಯಿಂದ ಪಾರಾಗಲು ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

ನಾಲ್ವರು ಅಪರಾಧಿಗಳ ಪೈಕಿ ವಿನಯ ಶರ್ಮಾ (26) ಮತ್ತು ಮುಕೇಶ್‌ ಕುಮಾರ್‌ (32) ಸಲ್ಲಿಸಿದ್ದ ಅರ್ಜಿಯನ್ನು, ನ್ಯಾಯಮೂರ್ತಿ ಎನ್‌.ವಿ.ರಮಣ ಅವರ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯಪೀಠವು ತಿರಸ್ಕರಿಸಿತು. ಅರ್ಜಿ ಪರಿಗಣಿಸಲು ಯಾವುದೇ ಅರ್ಹತೆ ಇಲ್ಲ ಎಂದು ಹೇಳಿತು. ಹೀಗಾಗಿ ಗಲ್ಲು ಶಿಕ್ಷೆ ಬಹುತೇಕ ಖಾತ್ರಿಯಾಗಿದೆ.

ಇದನ್ನೂ ಓದಿ: ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಗಲ್ಲು: ನೇಣಿಗೇರಿಸುವ ಮುನ್ನ ಏನೇನು ಮಾಡ್ತಾರೆ?

ಅಪರಾಧಿಗಳನ್ನು ಇದೇ 22ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ಪಟಿಯಾಲಹೌಸ್ ನ್ಯಾಯಾಲಯ ಇತ್ತೀಚೆಗೆ ವಾರಂಟ್ ಜಾರಿ ಮಾಡಿತ್ತು. ಬಳಿಕ ಕಾನೂನು ಪರಿಹಾರ ಕಂಡುಕೊಳ್ಳಲು 14 ದಿನಗಳ ಕಾಲಾವಕಾಶ ನೀಡಿತ್ತು. ಬಳಿಕ ಅಪರಾಧಿಗಳ ಪೈಕಿ ವಿನಯ್ ಕುಮಾರ್ ಶರ್ಮಾ ಮತ್ತು ಮುಕೇಶ್ ಸಿಂಗ್ ಸುಪ್ರೀಂ ಕೋರ್ಟ್‌ಗೆ ಪರಿಹಾರಾತ್ಮ ಅರ್ಜಿ ಸಲ್ಲಿಸಿದ್ದರು.

ಈ ಮಧ್ಯೆ, ತಿಹಾರ್ ಜೈಲು ಅಧಿಕಾರಿಗಳು ಅಪರಾಧಿಗಳನ್ನು ಗಲ್ಲಿಗೇರಿಸಲು ಸಿದ್ಧತೆ ಆರಂಭಿಸಿದ್ದಾರೆ.

ದೆಹಲಿ ಹೈಕೋರ್ಟ್‌ಗೆ ಅರ್ಜಿ: ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಮರಣದಂಡನೆಗೆ ತಡೆ ನೀಡಬೇಕು ಎಂದು ಅಪರಾಧಿ ಮುಕೇಶ್‌ ಸಿಂಗ್‌ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಬುಧವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ.

ಇನ್ನಷ್ಟು...

ನಿರ್ಭಯಾ ಅತ್ಯಾಚಾರ ಅಪರಾಧಿಗಳ ಗಲ್ಲಿಗೇರಿಸಲು ನಡೆಯುತ್ತಿದೆ ತ್ವರಿತ ಸಿದ್ಧತೆ

ನಿರ್ಭಯಾ ಅತ್ಯಾಚಾರ ಪ್ರಕರಣ: ಅಂದಿನಿಂದ ಇಂದಿನವರೆಗೆ ಏನೇನಾಯ್ತು?

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು