ಗುರುವಾರ , ಜನವರಿ 23, 2020
28 °C

ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಇದೇ 22ಕ್ಕೆ ಗಲ್ಲು: ದೆಹಲಿ ಕೋರ್ಟ್ ವಾರಂಟ್

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ಇದೇ 22ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ಪಟಿಯಾಲಾ ಹೌಸ್ ನ್ಯಾಯಾಲಯ ವಾರಂಟ್ ಜಾರಿಮಾಡಿದೆ.

ಅಪರಾಧಿಗಳು 14 ದಿನಗಳಲ್ಲಿ ಕಾನೂನು ಪರಿಹಾರಗಳನ್ನು ಕಂಡುಕೊಳ್ಳಬಹುದು ಎಂದೂ ನ್ಯಾಯಾಲಯ ಹೇಳಿದೆ.

ಆದೇಶದ ಬೆನ್ನಲ್ಲೇ, ಸುಪ್ರೀಂ ಕೋರ್ಟ್‌ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಲಾಗುವುದು ಎಂದು ಅಪರಾಧಿಗಳ ಪರ ವಕೀಲ ಎ.ಪಿ.ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ನಿರ್ಭಯಾ ಅತ್ಯಾಚಾರ ಪ್ರಕರಣ: ಅಂದಿನಿಂದ ಇಂದಿನವರೆಗೆ ಏನೇನಾಯ್ತು?

ಅಪರಾಧಿ ಅಕ್ಷಯ್‌ ಕುಮಾರ್‌ನಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆಯನ್ನು ಸುಪ್ರೀಂ ಕೋರ್ಟ್‌ 2019ರ ಡಿಸೆಂಬರ್ 18ರಂದು ಮತ್ತೊಮ್ಮೆ ದೃಢಪಡಿಸಿತ್ತು. ಉಳಿದ ಅಪರಾಧಿಗಳಾದ ಮುಕೇಶ್ ಸಿಂಗ್, ಪವನ್ ಗುಪ್ತಾ ಮತ್ತು ವಿನಯ್ ಶರ್ಮಾರ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮೊದಲೇ ತಿರಸ್ಕರಿಸಿತ್ತು. ಹೀಗಾಗಿ ಗಲ್ಲು ಶಿಕ್ಷೆ ಜಾರಿ ಬಹುತೇಕ ಖಚಿತವಾಗಿತ್ತು.

ಈ ಮಧ್ಯೆ, ಶಿಕ್ಷೆ ಜಾರಿ ಕುರಿತು ಅಪರಾಧಿಗಳಿಗೆ ಮಾಹಿತಿ ನೀಡಲು ‘ಹ್ಯಾಂಗ್‌ಮ್ಯಾನ್‌ (ಗಲ್ಲಿಗೇರಿಸುವ ವ್ಯಕ್ತಿ)’ ಒದಗಿಸುವಂತೆ ತಿಹಾರ್ ಜೈಲು ಅಧಿಕಾರಿಗಳು ಕಾರಾಗೃಹ ಮುಖ್ಯಸ್ಥರಿಗೆ ಪತ್ರ ಬರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿರ್ಭಯಾ ಪ್ರಕರಣದಲ್ಲಿ ಒಟ್ಟು ಆರು ಜನರನ್ನು ಅಪರಾಧಿಗಳನ್ನಾಗಿ ತೀರ್ಪು ನೀಡಲಾಗಿತ್ತು. ಇವರಲ್ಲೊಬ್ಬ ಅಪ್ರಾಪ್ತ ಜೈಲು ಶಿಕ್ಷೆಯನ್ನು ಅನುಭವಿಸಿ ನಂತರ ಬಿಡುಗಡೆಯಾಗಿದ್ದರೆ, ಮತ್ತೊಬ್ಬ ರಾಮ್ ಸಿಂಗ್ ಎಂಬಾತ ತಿಹಾರ್ ಜೈಲಿನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದನು. ಉಳಿದ ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಲಾಗಿತ್ತು. ಈ ಪೈಕಿ ಅಪರಾಧಿ ಅಕ್ಷಯ್ ಸಿಂಗ್ ಹೊರತುಪಡಿಸಿ ಇತರ ಅಪರಾಧಿಗಳಾದ ಮುಕೇಶ್ ಸಿಂಗ್, ಪವನ್ ಗುಪ್ತಾ ಮತ್ತು ವಿನಯ್ ಶರ್ಮಾರ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಹಿಂದೆಯೇ ತಿರಸ್ಕರಿಸಿತ್ತು. ಅಕ್ಷಯ್ ಸಿಂಗ್ ಮರುಪರಿಶೀಲನಾ ಅರ್ಜಿಯನ್ನು 2019ರ ಡಿಸೆಂಬರ್ 18ರಂದು ತಿರಸ್ಕರಿಸಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು