ಸೋಮವಾರ, ಜೂಲೈ 13, 2020
23 °C

ಗುರುಗ್ರಾಮ–ದೆಹಲಿ ನಡುವಿನ ರಸ್ತೆ ಬಂದ್:  ನಾಗರಿಕರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಗುರುಗ್ರಾಮ ಮತ್ತು  ದೆಹಲಿ ನಡುವಿನ ರಸ್ತೆಯನ್ನು ಬಂದ್ ಹರಿಯಾಣ ಸರ್ಕಾರ ನಿನ್ನೆ ರಾತ್ರಿ ಬಂದ್ ಮಾಡಿದ್ದರಿಂದ ಗಡಿ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್ ಉಂಟಾಗಿತ್ತು.

ಇದರಿಂದ ಗೊಂದಲಕ್ಕೆ ಒಳಗಾದ ವಾಹನ ಸವಾರರು ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ಬಹುತೇಕ ವಲಸೆ ಹಾಗೂ ಕೂಲಿ ಕಾರ್ಮಿಕರು ಇದ್ದರು. ಸೈಕಲ್‌ಗಳು ಹಾಗೂ ದ್ವಿಚಕ್ರ ವಾಹನಗಳು, ಕಾರುಗಳು, ಲಘು ವಾಣಿಜ್ಯ ವಾಹನಗಳ ಮೂಲಕ ತಮ್ಮ ಸ್ವಂತ ಊರುಗಳಿಗೆ ತೆರಳಲು ಮುಂದಾಗಿದ್ದರು. 

ಈ ವೇಳೆ ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರನ್ನು ಮಾತ್ರ ತಪಾಸಣೆ ನಡೆಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇತರೆ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ.

ಹರಿಯಾಣದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಹರಿಯಾಣ ಸರ್ಕಾರ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದೆ. ಇದರ ಮೊದಲ ಭಾಗವಾಗಿ ಗುರುಗ್ರಾಮ ಮತ್ತು ದೆಹಲಿ ನಡುವಿನ ರಸ್ತೆಯನ್ನು ಬಂದ್ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು