ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ: ಚಿದಂಬರಂ ಜಾಮೀನು ಅರ್ಜಿ ವಜಾ

Last Updated 15 ನವೆಂಬರ್ 2019, 22:03 IST
ಅಕ್ಷರ ಗಾತ್ರ

ನವದೆಹಲಿ: ಐಎನ್‌ಎಕ್ಸ್‌ ಮೀಡಿಯಾಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆಸಂಬಂಧಿಸಿ ದಂತೆ ಜಾಮೀನು ನೀಡುವಂತೆ ಕೋರಿ ಪಿ. ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಆರೋಪಗಳು ಗಂಭೀರ ಸ್ವರೂಪದ್ದಾಗಿದ್ದು, ಅಪರಾಧದಲ್ಲಿ ಆರೋಪಿ ಪ್ರಮುಖ ಭಾಗಿದಾರರಾಗಿದ್ದಾರೆ. ಹೀಗಾಗಿ ಜಾಮೀನು ನೀಡಬಾರದು ಎಂದುಪ್ರಕರಣ ದಾಖಲಿಸಿರುವಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಇ.ಡಿ ಮನವಿಯನ್ನು ಕೋರ್ಟ್‌ ಪುರಸ್ಕರಿಸಿದೆ.

‘ಜಾಮೀನು ನೀಡಿದ್ದೇ ಆದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾದಂತಾಗುತ್ತದೆ’ ಎಂದು ನ್ಯಾಯಮೂರ್ತಿ ಸುರೇಶ್‌ ಕೈತ್‌ ಹೇಳಿದ್ದಾರೆ.ಇದೇ 8ರಂದು ಅರ್ಜಿ ವಿಚಾರಣೆ ನಡೆದಿತ್ತು. ಅ.16ರಂದು ಪ್ರಕರಣ ಸಂಬಂಧ ಇ.ಡಿ ಚಿದಂಬರಂ ಅವರನ್ನು ಬಂಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT