ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ನಿಷೇಧಕ್ಕೆ ನಕಾರ

7

ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ನಿಷೇಧಕ್ಕೆ ನಕಾರ

Published:
Updated:

ನವದೆಹಲಿ: ‘ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರ ಹಾಗೂ ಅದರ ಟ್ರೇಲರ್‌ ಅನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಬುಧವಾರ ತಳ್ಳಿಹಾಕಿದೆ.

ಸಾಂವಿಧಾನಿಕ ಹುದ್ದೆಯಾದ ಪ್ರಧಾನಿ ಸ್ಥಾನಕ್ಕೆ ಚಿತ್ರದಿಂದ ಅಪಮಾನವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಅರ್ಜಿ ಸಲ್ಲಿಸಿರುವಲ್ಲಿ ಕೇವಲ ಅರ್ಜಿದಾರರ ವೈಯಕ್ತಿಕ ಹಿತಾಸಕ್ತಿ ಅಡಗಿದೆ ಎಂದು ವಿಚಾರಣೆ ವೇಳೆ ನ್ಯಾಯಮೂರ್ತಿ ವಿ.ಕೆ. ರಾವ್ ಹೇಳಿದ್ದಾರೆ.

ಪಿಐಎಲ್‌ನಲ್ಲಿ ನಮ್ಮನ್ನು ಪ್ರತಿವಾದಿಗಳನ್ನಾಗಿ ಮಾಡಿಲ್ಲ. ಆದ್ದರಿಂದ ನಮ್ಮ ನಿಲುವು ಕೇಳದೆ ಯಾವುದೇ ಆದೇಶ ಹೊರಡಿಸಬಾರದು ಎಂದು ಚಿತ್ರದ ನಿರ್ಮಾಪಕರು ವಿಚಾರಣೆ ವೇಳೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 11

  Happy
 • 0

  Amused
 • 0

  Sad
 • 0

  Frustrated
 • 7

  Angry

Comments:

0 comments

Write the first review for this !