ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿದಂಬರಂಗೆ ಅನಾರೋಗ್ಯ: ವರದಿಗೆ ಸಮಿತಿ

ಸಮಿತಿ ರಚನೆಗೆ ಏಮ್ಸ್‌ ನಿರ್ದೇಶಕರಿಗೆ ದೆಹಲಿ ಹೈಕೋರ್ಟ್‌ ನಿರ್ದೇಶನ
Last Updated 31 ಅಕ್ಟೋಬರ್ 2019, 20:28 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಐಎನ್‌ಎಕ್ಸ್‌ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್‌ ಜೈಲಿನಲ್ಲಿರುವ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಆರೋಗ್ಯದ ಬಗ್ಗೆ ಅಭಿಪ್ರಾಯ ನೀಡಲು, ತಕ್ಷಣದಲ್ಲೇ ಸಮಿತಿ ರಚಿಸಲು ಏಮ್ಸ್‌ ನಿರ್ದೇಶಕರಿಗೆ ದೆಹಲಿ ಹೈಕೋರ್ಟ್‌ ಗುರುವಾರ ನಿರ್ದೇಶಿಸಿದೆ.

ಹೊಟ್ಟೆನೋವಿನಿಂದ ಬಳಲುತ್ತಿದ್ದ ಚಿದಂಬರಂ ಅವರನ್ನು ಸೋಮವಾರ ಏಮ್ಸ್‌ಗೆ ದಾಖಲಿಸಲಾಗಿತ್ತು. ಅನಾರೋಗ್ಯದ ಕಾರಣ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ 6 ದಿನದಮಧ್ಯಂತರ ಜಾಮೀನು ನೀಡಬೇಕು ಎಂದು ಚಿದಂಬರಂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ‘ಅಕ್ಟೋಬರ್‌ 5ರಿಂದ ನನಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿದೆ. ನನಗೆ ತಕ್ಷಣ ಚಿಕಿತ್ಸೆ ಅಗತ್ಯವಾಗಿದ್ದು, ಹೈದರಾಬಾದ್‌ನಲ್ಲಿರುವ ವೈದ್ಯರಾದ ನಾಗೇಶ್ವರ್‌ ರೆಡ್ಡಿ ಅವರಿಂದ ಚಿಕಿತ್ಸೆ ಪಡೆಯಬೇಕಾಗಿದೆ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್‌ ಕೈಟ್‌, ‘ಗುರುವಾರವೇ ಸಮಿತಿ ರಚಿಸಿ, ಚಿದಂಬರಂ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಚರ್ಚಿಸಿ ವರದಿ ಸಲ್ಲಿಸಬೇಕು. ಶುಕ್ರವಾರ ಈ ಕುರಿತು ವಿಚಾರಣೆ ನಡೆಸಲಾಗುವುದು’ ಎಂದರು.‘ಚಿದಂಬರಂ ಅವರಿಗೆ ಚಿಕಿತ್ಸೆ ನೀಡುತ್ತಿರುವ ನಾಗೇಶ್ವರ್‌ ರೆಡ್ಡಿ ಅವರನ್ನೂ ಸಮಿತಿಯಲ್ಲಿ ಸೇರಿಸುವಂತೆ’ ಏಮ್ಸ್‌ ನಿರ್ದೇಶಕರಿಗೆ ಸೂಚಿಸಿದರು.

ಸ್ಥಳಾಂತರಕ್ಕೆ ಮನವಿ: ‘ಚಿದಂಬರಂ ಅವರ ಆರೋಗ್ಯ ಕ್ಷೀಣಿಸಿದ್ದು, ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಕರೆದುಕೊಂಡು ಹೋಗಬೇಕಿದೆ’ ಎಂದುಚಿದಂಬರಂ ಅವರ ಪರ ವಾದಿಸುತ್ತಿರುವ ಹಿರಿಯ ವಕೀಲರಾದ ಕಪಿಲ್‌ ಸಿಬಿಲ್‌ ಹೇಳಿದರು.‘ಚಿದಂಬರಂ ಅವರ ತೂಕ 73 ಕೆ.ಜಿ.ಯಿಂದ 66 ಕೆ.ಜಿ.ಗೆ ಇಳಿಕೆಯಾಗಿದ್ದು, ಜೈಲಿನಲ್ಲಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ’ ಎಂದು ವಕೀಲರಾದ ಎ.ಎಂ.ಸಿಂಘ್ವಿ ವಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT