ಬುಧವಾರ, ಏಪ್ರಿಲ್ 8, 2020
19 °C

ಜಾಮಿಯಾ ವಿವಿ ಗಲಭೆ ಪ್ರಕರಣ: ಪೊಲೀಸರಿಗೆ ದೆಹಲಿ ಹೈಕೋರ್ಟ್ ನೋಟಿಸ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದೊಳಗೆ ನಡೆದ ಗಲಭೆ ಪ್ರಕರಣ ಸಂಬಂಧ ದೆಹಲಿ ಹೈಕೋರ್ಟ್ ಪೊಲೀಸರು ಹಾಗೂ ದೆಹಲಿ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವಿದ್ಯಾರ್ಥಿ ಮಹಮದ್ ಮುಸ್ತಫಾ ಈ ಸಂಬಂಧ ಹೈಕೋರ್ಟ್‌‌ಗೆ ಅರ್ಜಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ಪೊಲೀಸರು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಪರಿಹಾರವಾಗಿ ₹1 ಕೋಟಿ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ. 2019ರ ಡಿಸೆಂಬರ್ 15ರಂದು ಘಟನೆ ನಡೆದಿದ್ದು, ಪ್ರತಿಭಟನೆ ವೇಳೆ ಹಲವು ವಾಹನಗಳು ಬೆಂಕಿಗೆ ಅಹುತಿಯಾಗಿದ್ದವು. ಕೆಲ ವಿದ್ಯಾರ್ಥಿಗಳ ಮೇಲೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಜಾಮಿಯಾ ವಿವಿ ಹಿಂಸಾಚಾರ: 10 ಮಂದಿಯ ಬಂಧನ

ಗುರುವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು