ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಹಿಂಸಾಚಾರ: ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

Last Updated 26 ಫೆಬ್ರುವರಿ 2020, 6:01 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಪರ–ವಿರುದ್ಧದ ಪ್ರತಿಭಟನೆಯಲ್ಲಿ ಈಶಾನ್ಯ ದೆಹಲಿಯಲ್ಲಿ ಉಂಟಾಗಿರುವ ಹಿಂಸಾಚಾರ ಸಂಬಂಧ ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ, ಸಂತ್ರಸ್ತರಿಗೆ ಪರಿಹಾರ ಮತ್ತು ಪ್ರಚೋದನಾಕಾರಿ ಭಾಷಣ ಮಾಡಿದ ಹಲವಾರು ರಾಜಕೀಯ ನಾಯಕರನ್ನು ಬಂಧಿಸುವುರು ಕುರಿತಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ದೆಹಲಿ ಪೊಲೀಸ್ ಕಮಿಷನರ್‌ಗೆನೋಟಿಸ್ ಜಾರಿ ಮಾಡಿದೆ.

ಸಿಎಎ ಕುರಿತಾಗಿ ಭುಗಿಲೆದ್ದ ಈಶಾನ್ಯ ದೆಹಲಿಯ ಹಿಂಸಾಚಾರ ಕುರಿತಂತೆ ಮಧ್ಯಾಹ್ನ 12.30ರೊಳಗಾಗಿ ಪ್ರತಿಕ್ರಿಯಿಸಬೇಕು ಎಂದಿರುವ ನ್ಯಾಯಾಲಯ, ಕೋರ್ಟ್ ಆದೇಶಕ್ಕೆ ಪೊಲೀಸರು ಕಾಯುವ ಅಗತ್ಯವಿಲ್ಲ. ಬದಲಿಗೆ ಹಿಂಸಾಚಾರ ತಡೆಗಟ್ಟಲು ಸ್ವಯಂಪ್ರೇರಿತರಾಗಿ ಅಗತ್ಯ ಕ್ರಮ ಕೈಗೊಳ್ಳಿ ಎಂದುಆದೇಶಿಸಿದೆ.

ಸಿಎಎ ಪರ ಮತ್ತು ವಿರೋಧದ ಪ್ರತಿಭಟನೆಯು ಸೋಮವಾರ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಇದುವರೆಗೂ 20 ಜನರು ಮೃತಪಟ್ಟಿದ್ದು, 189 ಜನರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT