ಅಸ್ತಾನಾ ವಿರುದ್ಧದ ಭ್ರಷ್ಟಾಚಾರ ಆರೋಪ ರದ್ದುಗೊಳಿಸಲು ದೆಹಲಿ ಹೈಕೋರ್ಟ್‌ ನಕಾರ

7
10 ವಾರಗಳೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲು ನಿರ್ದೇಶನ

ಅಸ್ತಾನಾ ವಿರುದ್ಧದ ಭ್ರಷ್ಟಾಚಾರ ಆರೋಪ ರದ್ದುಗೊಳಿಸಲು ದೆಹಲಿ ಹೈಕೋರ್ಟ್‌ ನಕಾರ

Published:
Updated:

ನವದೆಹಲಿ: ಸಿಬಿಐನ ವಿಶೇಷ ನಿರ್ದೇಶಕರಾಗಿದ್ದ ರಾಕೇಶ್‌ ಅಸ್ತಾನಾ ವಿರುದ್ಧ ಇದ್ದ ಭ್ರಷ್ಟಾಚಾರ ಪ್ರಕರಣವನ್ನು ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದ್ದು, ಇನ್ನು 10 ವಾರಗಳೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿದೆ.

ಸಿಬಿಐ ಪ್ರಕರಣ ದಾಖಲಿಸುವ ಮುನ್ನ ಸರ್ಕಾರದ ಅನುಮತಿ ಪಡೆಯಬೇಕು ಎನ್ನುವ ನಿಲುವನ್ನೂ ತಿರಸ್ಕರಿಸಿರುವ ನ್ಯಾಯಾಲಯ, ಅಪರಾಧ ಕಂಡುಬಂದರೆ ತನಿಖೆ ನಡೆಯಲೇಬೇಕು ಎಂದು ಹೇಳಿದೆ. 

ಅಲೋಕ್‌ ವರ್ಮಾ ಅವರ ಆಜ್ಞೆ ಮೇರೆಗೆ ದಾಖಲಿಸಲಾಗಿರುವ ಎಫ್‌ಐಆರ್ ರದ್ದುಗೊಳಿಸಲು ಕೋರಿ ಅಸ್ತಾನ ಅರ್ಜಿ ಸಲ್ಲಿಸಿದ್ದರು. ಎಲ್ಲರ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ನಜ್ಮಿ ವಜೀರಿ ಜನವರಿ 20ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದ ಮೂಲಕ ಬುಧವಾರವಷ್ಟೇ ಸಿಬಿಐ ನಿರ್ದೇಶಕ ಹುದ್ದೆಗೆ ಮರಳಿದ್ದ ಅಲೋಕ್‌ ವರ್ಮಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯ ಸರಣಿ ಸಭೆಗಳ ಬಳಿಕ ಗುರುವಾರ ವಜಾಮಾಡಿತ್ತು.

ವರ್ಮಾ ಮತ್ತು ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಅಸ್ತಾನಾ ನಡುವೆ ಇತ್ತೀಚಿನ ತಿಂಗಳುಗಳಲ್ಲಿ ತೀವ್ರ ಕಚ್ಚಾಟ ನಡೆದಿತ್ತು. ಈ ಇಬ್ಬರೂ ಪರಸ್ಪರರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಮಾಡಿದ್ದರು. ಅದರ ಪರಿಣಾಮವಾಗಿ 2018ರ ಅಕ್ಟೋಬರ್‌ 23ರಂದು ಅಲೋಕ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಕೇಂದ್ರ ಸರ್ಕಾರ ಕಳುಹಿಸಿತ್ತು. 

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !