ಬುಧವಾರ, ಏಪ್ರಿಲ್ 1, 2020
19 °C
ಸೋಂಕಿತರ ಸಂಖ್ಯೆ

ಕೋವಿಡ್ | ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆ: ಮುಂಜಾಗ್ರತೆಗೆ ಕಟ್ಟುನಿಟ್ಟಿನ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಥಾಯ್ಲೆಂಡ್‌ ಹಾಗೂ ಮಲೇಷ್ಯಾಗೆ ಭೇಟಿ ನೀಡಿ ಮರಳಿದ್ದ ದೆಹಲಿ ಮೂಲದ ವ್ಯಕ್ತಿಯೊಬ್ಬರಿಗೆ ಕೋವಿಡ್‌ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕು ಪೀಡಿತರ ಸಂಖ್ಯೆ 31ಕ್ಕೆ ಏರಿದೆ.

‘ದೆಹಲಿ ಮೂಲದ 25 ವರ್ಷದ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಆರೋಗ್ಯಸ್ಥಿತಿ ಸ್ಥಿರವಾಗಿದೆ. ನಿಗಾ ಇರಿಸಲಾಗಿದೆ’ ಎಂದು ಆರೋಗ್ಯ ಇಲಾಖೆ ಅಧಿಕಾರಿ ತಿಳಿಸಿದರು.

‘ಇವರ ಕುಟುಂಬದ ಏಳು ಸದಸ್ಯರ ಆರೋಗ್ಯದ ಮೇಲೂ ನಿಗಾ ಇರಿಸಲಾಗಿದ್ದು, ಪ್ರತ್ಯೇಕವಾಗಿ ಇರಿಸಲಾಗಿದೆ. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.

ಸೋಂಕು ವ್ಯಾಪಿಸುವುದನ್ನು ತಡೆಯಲು ಮುಂಜಾಗ್ರತೆಯಾಗಿ ವಿವಿಧ ಕ್ರಮಗಳನ್ನು ಕೈಗೊಂಡಿದ್ದು, ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸಾರ್ವಜನಿಕರಿಗೆ ಕಟ್ಟೆಚ್ಚರ ನೀಡಲಾಗಿದೆ.

ಮುಂಜಾಗ್ರತೆಯಾಗಿ ಶಾಲೆಗಳಲ್ಲಿ ಬೆಳಗಿನ ಸಾಮೂಹಿಕ ಪ್ರಾರ್ಥನೆ ನಡೆಸಬಾರದು ಮತ್ತು ಶಾಲೆಗಳಲ್ಲಿ ಹಾಜರಾತಿ ದಾಖಲಾತಿಗೆ ಬಯೊಮೆಟ್ರಿಕ್‌ ಪದ್ಧತಿ ಕೈಬಿಡಲು ದೆಹಲಿ ಸರ್ಕಾರ ನಿರ್ದೇಶಿಸಿದೆ.

ಮಾರ್ಚ್‌ ಅಂತ್ಯದವರೆಗೆ ಕೇಂದ್ರ ಸರ್ಕಾರದ ಎಲ್ಲ ನೌಕರರಿಗೆ ಬಯೋಮೆಟ್ರಿಕ್‌ ಹಾಜರಾತಿಯಿಂದ ವಿನಾಯಿತಿ ನೀಡಿ ಸಿಬ್ಬಂದಿ ಮತ್ತು ಆಡಳಿತ ತರಬೇತಿ ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸಂಸತ್‌ ಆವರಣದಲ್ಲಿ ಸಭೆ, ಸಮಾರಂಭಗಳನ್ನು ನಡೆಸದಂತೆ ಸೂಚಿಸಿದೆ.

‘ತಾಜ್‌ ಮಹಲ್‌’ಗೂ ವೀಕ್ಷಣೆಗೂ ನಿರ್ಬಂಧ?
ಪ್ರತಿನಿತ್ಯ 25 ಸಾವಿರಕ್ಕೂ ಅಧಿಕ ಪ್ರವಾಸಿಗರನ್ನು ಸೆಳೆಯುವ ತಾಜ್‌ ಮಹಲ್‌ ವೀಕ್ಷಣೆಗೆ ತಾತ್ಕಾಲಿಕವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರುವ ಸಾಧ್ಯತೆ ಇದೆ.

ಸೋಂಕು ಭೀತಿ ಹಿನ್ನೆಲೆಯಲ್ಲಿ ತಾಜ್‌ ಮಹಲ್‌ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲು ಆಗ್ರಹಿಸಿ ಆಗ್ರಾದ ಮೇಯರ್‌ ನವೀನ್‌ ಜೈನ್‌ ಕೇಂದ್ರದ ಪ್ರವಾಸೋದ್ಯಮ ಸಚಿವರಿಗೆ ಪತ್ರ ಬರೆದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು