ಶನಿವಾರ, ಮೇ 8, 2021
17 °C

ದೆಹಲಿ: ವ್ಯಾಟ್‌ ಕಡಿತ ನಿರಾಕರಿಸಿದ ಆಪ್ ಸರ್ಕಾರ, 400 ಪೆಟ್ರೋಲ್‌ ಬಂಕ್‌ ಬಂದ್‌

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ದೆಹಲಿ: ತೈಲದ ಮೇಲೆ ವಿಧಿಸುವ ಮೌಲ್ಯವರ್ಧಿತ ತೆರಿಗೆ (ವ್ಯಾಟ್‌) ಕಡಿತಗೊಳಿಸಲು ನಿರಾಕರಿಸಿದ ಆಪ್‌ ಸರ್ಕಾರದ ವಿರುದ್ಧ ಪೆಟ್ರೋಲ್‌ ಬಂಕ್‌ಗಳು ಹಾಗೂ ಸಾಂದ್ರೀಕೃತ ನೈಸರ್ಗಿಕ ಅನಿಲದ (ಸಿಎನ್‌ಜಿ) ಸಂಸ್ಥೆಗಳು ಪ್ರತಿಭಟನೆಗೆ ಮುಂದಾಗಿವೆ.

ದೆಹಲಿ ಪೆಟ್ರೋಲ್ ಡೀಲರ್ಸ್‌ ಅಸೋಸಿಯೇಷನ್ (ಡಿಪಿಡಿಎ) ಪ್ರತಿಭಟನೆಯ ನೇತೃತ್ವ ವಹಿಸಿದ್ದು, ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪ್ರತಿಭಟನೆ ನಡೆಸಲಿದೆ.

‘ಉತ್ತರಪ್ರದೇಶ ಹಾಗೂ ಹರಿಯಾಣದಲ್ಲಿ ಪೆಟ್ರೋಲ್‌, ಡೀಸೆಲ್‌ ಮೇಲೆ ವ್ಯಾಟ್‌ ಕಡಿಮೆಗೊಳಿಸಿರುವುದರಿಂದ ದೆಹಲಿಯಲ್ಲಿ ಗ್ರಾಹಕರು ಸಂಖ್ಯೆ ಕಡಿಮೆಯಾಗಿದೆ. ತೈಲ ಮಾರಾಟದಲ್ಲಿ ಭಾರಿ ಕುಸಿತ ಕಂಡಿದೆ’ ಎಂದು ಡಿಪಿಡಿಎ ಅಧ್ಯಕ್ಷ ನಿಶ್ಚಲ್‌ ಸಿಂಘಾನಿಯಾ ಹೇಳಿದ್ದಾರೆ.

‘ಸೆ. 4ರಂದು ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಪ್ರತಿ ಲೀಟರ್‌ಗೆ ₹2.50 ದರ ಕಡಿತಗೊಳಿಸಿತು. ಇದಾದ ಬಳಿಕ ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ವ್ಯಾಟ್‌ ತೆರಿಗೆ ಕಡಿಮೆ ಮಾಡಿದವು. ಆದರೆ ರಾಜ್ಯ ಸರ್ಕಾರ ತೆರಿಗೆ ಕಡಿತಗೊಳಿಸಲು ನಿರಾಕರಿಸಿದೆ’ ಎಂದು ಸಿಂಘಾನಿಯಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ದರದ ವ್ಯತ್ಯಾಸದಿಂದ ತೈಲ ಮಾರಾಟ ಶೇಕಡ 50–60 ರಷ್ಟು ಕುಸಿದಿದೆ ಎಂದು ಮಾಹಿತಿ ನೀಡಿದರು.

‘ಪೆಟ್ರೋಲ್‌ ಪಂಪ್‌ಗಳನ್ನು ಬಂದ್‌ ಮಾಡುತ್ತಿರುವ ಮಾಲೀಕರಲ್ಲಿ ಬಹುತೇಕರು ಬಿಜೆಪಿಯವರು. ಅವರು ಒತ್ತಾಯಪೂರ್ವಕವಾಗಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದಾರೆ.

ಇದನ್ನು ಓದಿ...

ಸತತ ನಾಲ್ಕನೇ ದಿನವೂ ಇಂಧನ ದರ ಇಳಿಕೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು