ಸೋಮವಾರ, ಜೂನ್ 1, 2020
27 °C

ದೆಹಲಿಯಲ್ಲಿ ಈಗ ಡ್ರೋನ್ ಕ್ಯಾಮರಾ ಕಣ್ಗಾವಲು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಈಗ ಡ್ರೋನ್ ಕಣ್ಗಾವಲಿನಲ್ಲಿ ಇದೆ.

ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಇಲ್ಲಿನ ಪೊಲೀಸರು ಡ್ರೋನ್ ಕ್ಯಾಮರಾ ಬಳಸಿ ಜನರನ್ನು ನಿಯಂತ್ರಿಸಲು ಮುಂದಾಗಿದ್ದಾರೆ.

ಲಾಕ್ ಡೌನ್ ಇದ್ದರೂ ಜನರು ಹೊರಗೆ ಬಂದು ಓಡಾಡುತ್ತಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಇದರಿಂದಾಗಿ ಡ್ರೋನ್ ಕ್ಯಾಮರಾ ಬಳಸಿ ಜನರನ್ನು ನಿಯಂತ್ರಿಸಲು ಮುಂದಾಗಿದ್ದಾರೆ. ಏಪ್ರಿಲ್ 9 ರಂದು ದೆಹಲಿಯ ಜಾಮಿಯಾ ಮಸೀದಿ ಪ್ರದೇಶದಲ್ಲಿ ಕ್ಯಾಮರಾ ಬಳಸಿ ಪರಿಶೀಲನೆ ನಡೆಸಿದ್ದಾರೆ. ಅತ್ಯಂತ ಎತ್ತರದ ಪ್ರದೇಶದಿಂದ ಕ್ಯಾಮರಾ ಸಂಚರಿಸಿ ಇಡೀ ದೆಹಲಿಯಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಪರಿಶೀಲನೆ ನಡೆಸಲು ಅನುಕೂಲ ಮಾಡಿಕೊಡುತ್ತಿದೆ.

ದೆಹಲಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಅತಿ ಹೆಚ್ಚಾಗುತ್ತಿವೆ. ಇದರಿಂದಾಗಿ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡರೂ ಹರಡುವುದು ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು