ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಕಳೆದ 24 ಗಂಟೆಗಳಲ್ಲಿ 792 ಹೊಸ ಪ್ರಕರಣ, ಮೃತರ ಸಂಖ್ಯೆ 303

Last Updated 27 ಮೇ 2020, 11:27 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹಾವಳಿ ಮಿತಿಮೀರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 792 ಹೊಸ ಪ್ರಕರಣಗಳು ವರದಿಯಾಗಿರುವುದರೊಂದಿಗೆ ದೆಹಲಿಯಲ್ಲಿಒಂದೇ ದಿನದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆಯು 15,257ಕ್ಕೆ ಏರಿಕೆಯಾಗಿದೆ.

ಇದುವರೆಗೂ 7,264 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 7,690 ಸಕ್ರಿಯ ಪ್ರಕರಣಗಳಿವೆ ಎಂದು ಬುಧವಾರ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 15 ಜನರು ಕೋವಿಡ್-19ಗೆ ಮೃತಪಟ್ಟಿದ್ದು, ಮೃತರ ಸಂಖ್ಯೆಯು 303ಕ್ಕೆ ಏರಿಕೆಯಾಗಿದೆ.

ವಿವಿಧ ಆಸ್ಪತ್ರೆಗಳಿಂದ ಪಡೆದ ಪ್ರಕರಣಗಳ ಮಾಹಿತಿ ಆಧಾರದ ಮೇಲೆ ಡೆತ್ ಆಡಿಟ್ ಸಮಿತಿಯ ವರದಿ ಪ್ರಕಾರ, ಪ್ರಾಥಮಿಕವಾಗಿ ಸೋಂಕಿನಿಂದಲೇ ಸಾವಿನ ಪ್ರಕರಣಗಳು ವರದಿಯಾಗಿವೆ ಎಂಬುದನ್ನು ಅಂಕಿ ಅಂಶಗಳು ಉಲ್ಲೇಖಿಸುತ್ತವೆ ಎಂದು ಆರೋಗ್ಯ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.

ಮೇ 22 ರಂದು 24 ಗಂಟೆಗಳಲ್ಲಿ 660 ಹೊಸ ಪ್ರಕರಣಗಳು ವರದಿಯಾಗಿದ್ದವು. ಅದಾದ ಬಳಿಕ ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ಬುಧವಾರ ಒಂದೇ ದಿನದಲ್ಲಿ 700ಕ್ಕೂ ಹೆಚ್ಚಿನ ಕೋವಿಡ್-19 ಪ್ರಕರಣಗಳು ವರದಿಯಾಗಿವೆ.

ಕಂಟೈನ್‌ಮೆಂಟ್ ಝೋನ್‌ಗಳ ಸಂಖ್ಯೆಯು 96ಕ್ಕೆ ಏರಿಕೆಯಾಗಿದ್ದು, ಮಂಗಳವಾರವಷ್ಟೇ ಸೋಂಕಿತರ ಸಂಖ್ಯೆ 14,465 ಮತ್ತು ಮೃತರ ಸಂಖ್ಯೆ 288ಕ್ಕೆ ಏರಿಕೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT