ಭಾನುವಾರ, ಮಾರ್ಚ್ 29, 2020
19 °C

ಕೋವಿಡ್‌–19 | ಭಾರತದಲ್ಲಿ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಥಾಯ್ಲೆಂಡ್‌ ಮತ್ತು ಮಲೇಷಿಯಾಗೆ ಪ್ರಯಾಣ ಬೆಳೆಸಿ ಹಿಂತಿರುಗಿದ ವ್ಯಕ್ತಿಯೊಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಭಾರತದಲ್ಲಿ ಸೋಂಕು ಪೀಡಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ದೆಹಲಿಯ ಉತ್ತಮ ನಗರದ ನಿವಾಸಿಯಾಗಿರುವ ವ್ಯಕ್ತಿಯು ಥಾಯ್ಲೆಂಡ್ ಮತ್ತು ಮಲೇಷಿಯಾಗೆ ಪ್ರಯಾಣ ಬೆಳೆಸಿದ್ದರು. ಸದ್ಯ ರೋಗಿಯನ್ನು ಸೂಕ್ಷ್ಮ ನಿಗಾದಲ್ಲಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಗುರುವಾರವಷ್ಟೇ ಘಾಜಿಯಾಬಾದ್‌ ಮೂಲದ ಮಧ್ಯ ವಯಸ್ಕ ವ್ಯಕ್ತಿ ಇರಾನ್‌ಗೆ ಪ್ರಯಾಣ ಬೆಳೆಸಿ ಹಿಂತಿರುಗಿದ ಬಳಿಕ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸೆಂಟ್ರಲ್ ದೆಹಲಿಯಲ್ಲಿ ನಾಲ್ಕು ಪ್ರಕರಣಗಳು, ದೆಹಲಿಯಲ್ಲಿ ಎರಡು ಮತ್ತು ಘಾಜಿಯಾಬಾದ್ ಮತ್ತು ಗುರುಗ್ರಾಮದ ತಲಾ ಒಬ್ಬೊಬ್ಬ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 

ಬುಧವಾರದವರೆಗೂ ಇಟಲಿಯ 16 ಪ್ರವಾಸಿಗರು ಸೇರಿದಂತೆ ಭಾರತದಲ್ಲಿ 29 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿತ್ತು. ದೇಶದಲ್ಲೇ ಮೊದಲ ಬಾರಿಗೆ ಸೋಂಕು ದೃಢಪಟ್ಟಿದ್ದ ಕೇರಳದ ಮೂವರು ಇತ್ತೀಚೆಗಷ್ಟೇ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. 

ಕೋವಿಡ್-19 ಸೋಂಕು ಪೀಡಿತರ ಚಿಕಿತ್ಸೆಗಾಗಿಯೇ ದೆಹಲಿಯ ಲೋಕ್ ನಾಯಕ್ ಜೈಪ್ರಕಾಶ್ ನಾರಾಯಣ ಆಸ್ಪತ್ರೆಯಲ್ಲಿ 11 ಪ್ರತ್ಯೇಕ ಕೊಠಡಿ ಮತ್ತು ಪ್ರತ್ಯೇಕ ವಾರ್ಡ್‌ಗಳನ್ನು ತೆರೆಯಲಾಗಿದೆ ಎಂದು ಸರ್ಕಾರವು ತಿಳಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು