ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಚುನಾವಣೆ: ಸೋಲು ಒಪ್ಪಿಕೊಂಡಿದ್ದೇವೆ– ಬಿಜೆಪಿ ನಾಯಕರ ಪ್ರತಿಕ್ರಿಯೆಗಳು

Last Updated 11 ಫೆಬ್ರುವರಿ 2020, 10:36 IST
ಅಕ್ಷರ ಗಾತ್ರ

ನವದೆಹಲಿ: ಆರಂಭಿಕ ಟ್ರೆಂಡ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್‌ ತಿವಾರಿ ಫಲಿತಾಂಶ ಏನೇ ಬಂದರೂ ಸ್ವಾಗತಿಸುತ್ತೇವೆ ಎಂದು ಹೇಳಿದ್ದರು.

ದೆಹಲಿ ಮತದಾರರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಅಭಿನಂದನೆಗಳು. ಚುನಾವಣೆ ಸಂದರ್ಭದಲ್ಲಿ ಹಗಲಿರುಳು ದುಡಿದ ಕಾರ್ಯಕರ್ತರಿಗೆ ನನ್ನ ವಂದನೆಗಳು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಟ್ವೀಟ್ ಮಾಡಿದ್ದಾರೆ.

ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ, ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಅಭಿನಂದನೆಗಳು ಎಂದು ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಗೌತಮ್‌ ಗಂಭೀರ್ ಹೇಳಿದ್ದಾರೆ.

ನಾವು ದೆಹಲಿ ಜನರ ಮನಸ್ಸು ಗೆಲ್ಲುವಲ್ಲಿ ಸಾಕಷ್ಟು ಪ್ರಯತ್ನ ಮಾಡಿದೆವು ಆದರ ಜನರು ನಮಗೆ ಆಶೀರ್ವಾದ ಮಾಡಲಿಲ್ಲ. ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ದೆಹಲಿ ಜನರಿಗೆ ಉತ್ತಮ ಆಡಳಿತ ನೀಡಲಿ ಎಂದು ಗೌತಮ್‌ ಗಂಭೀರ್‌ ಹೇಳಿದ್ದಾರೆ.

ಬಿಜೆಪಿ ಸಂಸದ ಪರ್ವೇಶ್‌ ವರ್ಮಾ ನಾವು ಸೋಲನ್ನು ಒಪ್ಪಿಕೊಂಡಿದ್ದು, ಜನರನ್ನು ತಲುಪುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT