ಮಂಗಳವಾರ, ಏಪ್ರಿಲ್ 7, 2020
19 °C

ಸೂಕ್ಷ್ಮತೆಗಳಿಲ್ಲದ ನಾಯಕರನ್ನು ಆಯ್ಕೆ ಮಾಡಿದ್ದಕ್ಕೆ ಬೆಲೆ ತೆರಬೇಕಾಗಿದೆ: ಚಿದಂಬರಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದ ಬಗ್ಗೆ ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. 

ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿರುವ ಅವರು, ‘ದೂರದೃಷ್ಟಿ ಹಾಗೂ ಸೂಕ್ಷ್ಮತೆಗಳನ್ನು ಹೊಂದಿರದ ನಾಯಕರನ್ನು ಆಯ್ಕೆ ಮಾಡಿದ್ದಕ್ಕೆ ಇಂದು ಬೆಲೆ ತೆರೆಬೇಕಾಗಿ ಬಂದಿದೆ‘ ಎಂದು ತಿಳಿಸಿದ್ದಾರೆ. 

ಸರ್ಕಾರವು ಸಿಎಎ ವಿರೋಧಿ ‍ಪ್ರತಿಭಟನಾಕಾರರ ಧನಿಯನ್ನು ಆಲಿಸಬೇಕು. ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ತೀವ್ರ ಆತಂಕಕಾರಿಯಾಗಿವೆ. ಪೌರತ್ವ ತಿದ್ದುಪಡಿ ಕಾಯ್ದೆಯು ಜನರನ್ನು ಇಬ್ಬಾಗಿಸುತ್ತದೆ ಎಂದು ಚಿದಂಬರಂ ಕಳವಳ ವ್ಯಕ್ತಪಡಿಸಿದ್ದಾರೆ. 

ಸೋಮವಾರ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಓರ್ವ ಪೊಲೀಸ್ ಹೆಡ್‌ಕಾನ್ಸ್‌ಟೆಬಲ್ ಸೇರಿ ಏಳು ಜನ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು