ಸೋಮವಾರ, ಏಪ್ರಿಲ್ 6, 2020
19 °C

ದೆಹಲಿ ಗಲಭೆ, ಕೊರೊನಾ ಸೋಂಕಿನ ಬಗ್ಗೆ ಪ್ರಧಾನಿಯೊಂದಿಗೆ ಚರ್ಚಿಸಿದ ಕೇಜ್ರಿವಾಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರ ಮತ್ತು ಕೊರೊನಾ ಸೋಂಕು ತಡೆಗಟ್ಟಲು ತೆಗೆದುಕೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚಿಸಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ. 

ಕಳೆದ ತಿಂಗಳು ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ಕೇಜ್ರಿವಾಲ್‌ ಅವರು ಇದೇ ಮೊದಲ ಬಾರಿ ಪ್ರಧಾನಿ ಮೋದಿಯವರನ್ನು ದೆಹಲಿಯಲ್ಲಿಂದು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

‘ರಾಷ್ಟ್ರ ರಾಜಧಾನಿಯಲ್ಲಿ ಇಂತಹ ಗಲಭೆಗಳು ಮತ್ತೆ ಸಂಭವಿಸದ ಹಾಗೆ ನಾವು ಪ್ರಯತ್ನಿಸಬೇಕು. ಘರ್ಷಣೆಗೆ ಕಾರಣರಾದವರು ಯಾವುದೇ ಪಕ್ಷಕ್ಕೆ ಸೇರಿರಲಿ, ಅವರನ್ನು ನಾವು ಸುಮ್ಮನೇ ಬಿಡಬಾರದು ಎಂದು ಪ್ರಧಾನಿಗೆ ಮನವಿ ಮಾಡಿದ್ದೇನೆ’ ಎಂಬುದಾಗಿ ಹೇಳಿದ್ದಾರೆ. 

ಮಾರಕ ಕೊರೊನಾ ಸೋಂಕು ತಡೆಗಟ್ಟುವುದರ ಬಗ್ಗೆ ಪ್ರಧಾನಿಯೊಂದಿಗೆ ಚರ್ಚಿಸಿರುವುದಾಗಿ ಕೇಜ್ರಿವಾಲ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು