ಬುಧವಾರ, ಮೇ 12, 2021
27 °C

ದೆಹಲಿ ಹಿಂಸಾಚಾರ: ಆರೋಪಿ ಇಶ್ರತ್ ಜಹಾನ್‌ಗೆ ಮದುವೆಗಾಗಿ ಜಾಮೀನು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪುರಸಭೆಯ ಮಾಜಿ ಕೌನ್ಸಿಲರ್, ಕಾಂಗ್ರೆಸ್‌ನ ಇಶ್ರತ್ ಜಹಾನ್ ಅವರಿಗೆ ವಿವಾಹವಾಗಲು ದೆಹಲಿ ನ್ಯಾಯಾಲಯವು ಶನಿವಾರ 10 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಿದೆ. 

ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಹಿಂಸಾಚಾರ ಪ್ರಕರಣದಲ್ಲಿ ಇಶ್ರತ್ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

ಹೆಚ್ಚುವರಿ ಸೆಷೆನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು, ಜೂನ್ 10ರಿಂದ 19ರ ತನಕ ಒಟ್ಟು 10 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು, ಯಾವುದೇ ಸಾಕ್ಷ್ಯಾಧಾರಗಳನ್ನು ಹಾಳು ಮಾಡಬಾರದು, ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು’ ಎಂದು ನಿರ್ದೇಶನ ನೀಡಿದ್ದಾರೆ.

ಇಶ್ರತ್ ಪರ ವಕೀಲರಾದ ಎಸ್‌.ಕೆ. ಶರ್ಮಾ ಮತ್ತು ಲಲಿತ್ ವಲೀಚಾ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು