ಸೋಮವಾರ, ಮೇ 17, 2021
31 °C

ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಗಲಭೆ ಪೀಡಿತ ದೆಹಲಿಯಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. 

ಕಳೆದ ಭಾನುವಾರ ಸಂಜೆಯಿಂದ ಗುರುವಾರದವರೆಗೆ ಹೊತ್ತಿ ಉರಿದಿರುವ ಈಶಾನ್ಯ ದೆಹಲಿಯಲ್ಲಿ ಶುಕ್ರವಾರ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಈಶಾನ್ಯ ದೆಹಲಿಯ ಚಾಂದ್‌ಬಾಗ್‌, ಶಿವಪುರಿ, ಮೌಜ್‌ಪುರ, ಜಾಫರಾಬಾದ್‌, ಭಜನ್‌ಪುರ್‌, ಗೋಕುಲ್‌ಪುರಿ, ಭಾಗೀರಥಿ ವಿಹಾರ್‌, ಬಾಬರ್‌ಪುರ, ಸೀಲಂಪುರ್‌, ಖಜೂರಿಖಾಸ್‌, ಶಿವ್‌ವಿಹಾರ್‌, ಮುಸ್ತಫಾಬಾದ್‌ ಮತ್ತಿತರ ಪ್ರದೇಶಗಳಲ್ಲಿ ಈಗಲೂ ಬೂದಿ ಮೆಚ್ಚಿದ ಕೆಂಡದಂತಹ ಸ್ಥಿತಿ ಇದೆ. 

ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಸಂಘರ್ಷದಲ್ಲಿ ಇವರೆಗೂ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಗೆ ಆಗ್ರಹ 
ದೆಹಲಿ ಗಲಭೆ ಕುರಿತು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ಮೇಲ್ವಾಚರಣೆ ನಡೆಸುವಂತೆ ಆಗ್ರಹಿಸಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರಿಗೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಪತ್ರ ಬರೆದಿದ್ದಾರೆ. 

‘ಪರಿಸ್ಥಿತಿ ಶಾಂತಿಯುತ’
ದೆಹಲಿಯ ಜಾಫರಾಬಾದ್‌ ಪ್ರದೇಶಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸದ್ಯದ ಪರಿಸ್ಥಿತಿ ಶಾಂತಿಯುತವಾಗಿದೆ. ಆದರೆ, ಉದ್ವಿಗ್ನತೆ ಇನ್ನು ಹಾಗೆಯೇ ಉಳಿದಿದೆ’ ಎಂದು ತಿಳಿಸಿದ್ದಾರೆ. 

ಅತ್ಯಾಚಾರ ಅಥವಾ ಕಿರುಕುಳದಂತಹ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು