ಸೋಮವಾರ, ಮೇ 17, 2021
31 °C

ದೆಹಲಿ ಹಿಂಸಾಚಾರ | ಸಂಸತ್‌ನಲ್ಲಿ ನಿಲ್ಲದ ಪ್ರತಿಭಟನೆ, ನಡೆಯದ ಕಲಾಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಬುಧವಾರವೂ ಸಂಸತ್‌ನ ಉಭಯ ಸದನಗಳಲ್ಲಿ ಕಲಾಪಕ್ಕೆ ಅವಕಾಶ ದೊರೆಯಲಿಲ್ಲ.

ಲೋಕಸಭೆಯಲ್ಲಿ ಎರಡು ಬಾರಿ ಕಲಾಪ ಮುಂದೂಡಿದ ನಂತರವೂ ವಿಪಕ್ಷ ಸದಸ್ಯರು ಪ್ರತಿಭಟನೆ ಕೈಬಿಡಲಿಲ್ಲ.

ಮಧ್ಯಾಹ್ನ 2 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಗದ್ದಲದ ನಡುವೆಯೇ ನೇರ ತೆರಿಗೆಗಳ (ವಿವಿಧೆಡೆಯಿಂದ ವಿಶ್ವಾಸದೆಡೆಗೆ) ಮಸೂದೆ ಮಂಡಿಸಿದರು. ಈ ಸಂದರ್ಭ ಸ್ಪೀಕರ್‌ ಪೀಠದ ಎದುರು ಜಮಾಯಿಸಿದ ವಿರೋಧ ಪಕ್ಷಗಳ ಸದಸ್ಯರ ಘೋಷಣೆ ಮುಂದುವರಿದಿದ್ದರಿಂದ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

ರಾಜ್ಯಸಭೆಯಲ್ಲಿ ಕಲಾಪ ಆರಂಭ ಆಗುತ್ತಿದ್ದಂತೆಯೇ ವಿರೋಧ ಪಕ್ಷಗಳ ಸದಸ್ಯರಿಂದ ಘೋಷಣೆಗಳು ಕೇಳಿಬಂದಿದ್ದರಿಂದ ಸದನವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು